ಕ್ರಿಕೆಟ್

T20 WC: ನಾಯಕ ಕೊಹ್ಲಿ ಏಕಾಂಗಿ ಹೋರಾಟ; ಪಾಕ್ ಗೆ 152 ರನ್ ಗಳ ಗುರಿ ನೀಡಿದ ಟೀಂ ಇಂಡಿಯಾ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 12 ಹಂತದ ಗ್ರೂಪ್ 2ರ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಗೆಲ್ಲಲು 152 ರನ್ ಗಳ ಗುರಿ ನೀಡಿದೆ.

T20 WC: ನಾಯಕ ಕೊಹ್ಲಿ ಏಕಾಂಗಿ ಹೋರಾಟ; ಪಾಕ್ ಗೆ 152 ರನ್ ಗಳ ಗುರಿ ನೀಡಿದ ಟೀಂ ಇಂಡಿಯಾ
ಕೊಹ್ಲಿ
Published On :

ದುಬೈ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 12 ಹಂತದ ಗ್ರೂಪ್ 2ರ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಗೆಲ್ಲಲು 152 ರನ್ ಗಳ ಗುರಿ ನೀಡಿದೆ. 

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭಿಕ ಆಘಾತ ಎದುರಿಸಿತು. ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದು ಇದರ ಬೆನ್ನಲ್ಲೇ ಕೆಎಲ್ ರಾಹುಲ್ 3 ರನ್ ಗಳಿಗೆ ಔಟಾಗಿ ಭಾರತೀಯ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. 

ಈ ವೇಳೆ ನಾಯಕ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಮಾಡಿದ್ದು 57 ರನ್ ಬಾರಿಸಿದರು. ಇನ್ನು ರಿಷಬ್ ಪಂತ್ ಸಹ ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದು 39 ರನ್ ಬಾರಿಸಿದ್ದು ಇದರ ನೆರವಿನೊಂದಿಗೆ ಟೀಂ ಇಂಡಿಯಾ 151 ರನ್ ಪೇರಿಸಲು ಸಾಧ್ಯವಾಯಿತು. 

ಪಾಕಿಸ್ತಾನ ಪರ ಬೌಲಿಂಗ್ ನಲ್ಲಿ ಶಹೀನ್ ಶಾ ಅಫ್ರಿದಿ 3, ಹಸನ್ ಅಲಿ 2, ಶಾಬಾದ್ ಖಾನ್ ಮತ್ತು ಹ್ಯಾರಿಸ್ ರೂಫ್ ತಲಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.