ಬಿಸಿಸಿಐನ ಆ ವ್ಯಕ್ತಿಗೆ 'ಬುದ್ದು' ಪ್ರಶಸ್ತಿ ನೀಡಬೇಕು; ಪಾಕ್ ಜೊತೆ ಟೀಂ ಇಂಡಿಯಾ ಆಡಲೇಬಾರದು: ಸುಬ್ರಮಣಿಯನ್ ಸ್ವಾಮಿ
ಭಯೋತ್ಪಾದಕ ದೇಶವಾಗಿರುವ ಪಾಕಿಸ್ತಾನದೊಂದಿಗೆ, ನಮ್ಮ ಟೀಮ್ ಇಂಡಿಯಾ ಕ್ರಿಕೆಟ್ ಆಡಬಾರದು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.

ನವದೆಹಲಿ: ಭಯೋತ್ಪಾದಕ ದೇಶವಾಗಿರುವ ಪಾಕಿಸ್ತಾನದೊಂದಿಗೆ, ನಮ್ಮ ಟೀಮ್ ಇಂಡಿಯಾ ಕ್ರಿಕೆಟ್ ಆಡಬಾರದು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.
ನಿತ್ಯ ಅಮಾಯಕರ ಮಾರಣ ಹೋಮ ನಡೆಸುವ ದುರಾಕ್ರಮಿಗಳಾಗಿರುವ ಪಾಕಿಸ್ತಾನದೊಂದಿಗೆ ನಾವು ಕ್ರಿಕೆಟ್ ಆಡಬಾರದು. ಬಿಸಿಸಿಐನಲ್ಲಿ ಈ ಸಂಬಂಧ ನಿರ್ಧಾರ ಕೈಗೊಂಡ ವ್ಯಕ್ತಿಗೆ 2021 ವರ್ಷದ "ಬುದ್ದು" ಪ್ರಶಸ್ತಿ ನೀಡಬೇಕು ಎಂದು ಸ್ವಾಮಿ ಟ್ವೀಟ್ ನಲ್ಲಿ ವ್ಯಂಗ್ಯವಾಡಿದ್ದಾರೆ.
ಭಾನುವಾರ ದುಬೈನಲ್ಲಿ ನಡೆದ ಐಸಿಸಿ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತನ್ನ ಮೊದಲ ಪಂದ್ಯವನ್ನು ಸೋತ ನಂತರ ಹಲವಾರು ರಾಜಕಾರಣಿಗಳು ಟ್ವೀಟ್ ಮಾಡಿದ್ದಾರೆ. "ಗೆಲುವು ಹಾಗೂ ಸೋಲು ಆಟದ ಭಾಗವಾಗಿದೆ.
ಮೈಕೊಡವಿ ಎದ್ದುನಿಂತಿ ನಿಂತು ವಿಶ್ವಕಪ್ ಗೆಲ್ಲಲು ಟೀಮ್ ಇಂಡಿಯಾಗೆ ಮುಂಬರುವ ಪಂದ್ಯಗಳಿಗೆ ಆಲ್ ದಿ ಬೆಸ್ಟ್ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
ವಿಶ್ವಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ಫಲಿತಾಂಶವನ್ನು ಹಿಮ್ಮೆಟ್ಟಿಸಲಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


