5ನೇ ಟಿ20: ಶ್ರೇಯಸ್ ಅಯ್ಯರ್ ಅರ್ಧ ಶತಕ; 188 ರನ್ ಬೃಹತ್ ಮೊತ್ತ ಕಲೆ ಹಾಕಿದ ಟೀಂ ಇಂಡಿಯಾ!
ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಪೇರಿಸಿದೆ.

ಲಾಡರ್ಹಿಲ್: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಪೇರಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಇಶಾನ್ ಕಿಶನ್ 11 ರನ್ ಬಾರಿಸಿದ್ದರೆ ಶ್ರೇಯಸ್ ಅಯ್ಯರ್ 64 ರನ್ ಸಿಡಿಸಿದ್ದಾರೆ. ಇನ್ನು ದೀಪಕ್ ಹೂಡಾ 38 ಪೇರಿಸಿದ್ದರೆ ಸಂಜು ಸ್ಯಾಮ್ಸನ್ 15 ರನ್ ಬಾರಿಸಿದ್ದಾರೆ. ಇನ್ನು ತಂಡದ ನಾಯಕ ಹಾರ್ದಿಕ್ ಪಾಂಡ್ಯ 28 ರನ್ ಗಳಿಸಿ ರನೌಟ್ ಆಗಿದ್ದರೆ ದಿನೇಶ್ ಕಾರ್ತಿಕ್ 12 ರನ್ ಪೇರಿಸಿದ್ದಾರೆ.
ವೆಸ್ಟ್ ಇಂಡೀಸ್ ಪರ ಓಡೆನ್ ಸ್ಮಿತ್ 3, ಜೋಸನ್ ಹೋಲ್ಡರ್, ಡಾರ್ಕೆಸ್ ಮತ್ತು ವಾಲ್ಶ್ ತಲಾ 1 ವಿಕೆಟ್ ಪಡೆದಿದ್ದಾರೆ.
ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ 3-1 ಅಂತರದಿಂದ ಮುನ್ನಡೆ ಸಾಧಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


