ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಕೆ ಎಲ್ ರಾಹುಲ್ ಟೀಂ ಇಂಡಿಯಾ ನಾಯಕ
ಜಿಂಬಾಬ್ವೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಆರಂಭಿಕ ಆಟಗಾರ ಕೆಎಲ್ ರಾಹುಲ್ ಟೀಂ ಇಂಡಿಯಾವನ್ನು ಮುನ್ನೆಡಸಲಿದ್ದಾರೆ.

ನವದೆಹಲಿ: ಜಿಂಬಾಬ್ವೆಯಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಆರಂಭಿಕ ಆಟಗಾರ ಕೆಎಲ್ ರಾಹುಲ್ ಟೀಂ ಇಂಡಿಯಾವನ್ನು ಮುನ್ನೆಡಸಲಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡದಿಂದ ಕೆಎಲ್ ರಾಹುಲ್ ಅವರ ಫಿಟ್ನೆಸ್ ದೃಢಗೊಂಡ ಬಳಿಕ ಅವರನ್ನು ಈ ಸರಣಿಗೆ ಟೀಂ ಇಂಡಿಯಾದ ನಾಯಕನಾಗಿ ಪ್ರಕಟಿಸಲಾಗಿದೆ. ಶಿಖರ್ ಧವನ್ ಉಪ ನಾಯಕರಾಗಿದ್ದಾರೆ.
ಈ ಸರಣಿಯಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಜಸ್ಪ್ರೀತ್ ಬೂಮ್ರಾ , ಮೊಹಮ್ಮದ್ ಶಮಿ ಆಡುತ್ತಿಲ್ಲ. ಬೂಮ್ರಾ ಆಗಸ್ಟ್ 27 ರಿಂದ ಆರಂಭವಾಗಲಿರುವ ಏಷ್ಯಾ ಕಪ್ ಟೂರ್ನಿಯಿಂದಲೂ ಹೊರ ಬಿದಿದ್ದಾರೆ. ಈ ಟೂರ್ನಿಯಲ್ಲಿ ರಾಹುಲ್ , ದೀಪಕ್ ಹೂಡಾ ಮಾತ್ರ ಪ್ರಮುಖ ಆಟಗಾರರಾಗಿದ್ದಾರೆ.
ಏಕದಿನ ಸರಣಿ ಆಗಸ್ಟ್ 18 ರಂದು ಜಿಂಬಾಬ್ವೆಯ ಹರಾರೆಯಲ್ಲಿ ಆರಂಭವಾಗಲಿದ್ದು, ಆಗಸ್ಟ್ 22 ರಂದು ಕೊನೆಯ ಏಕದಿನ ಪಂದ್ಯ ನಡೆಯಲಿದೆ.
ಟೀಂ ಇಂಡಿಯಾ ಇಂತಿದೆ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ ( ಉಪ ನಾಯಕ) ಋತುರಾಜ್ ಗಾಯಕ್ ವಾಡ್, ಶುಭ್ ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶಾನ್ (ವಿಕೆಟ್ ಕೀಪರ್) ಸಂಜು ಸ್ಯಾಮ್ಸನ್ ( ವಿಕೆಟ್ ಕೀಪರ್) ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


