ಏಷ್ಯಾಕಪ್ 2022: ಕೊಹ್ಲಿ, ಸೂರ್ಯಕುಮಾರ್ ಯಾದವ್ ಅರ್ಧಶತಕ; ಹಾಂಗ್ ಕಾಂಗ್ ಗೆ 193 ಟಾರ್ಗೆಟ್ ನೀಡಿದ ಭಾರತ
ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ಹಾಂಗ್ ಕಾಂಗ್ ಗೆ ಗೆಲ್ಲಲು 193 ರನ್ ಗಳ ಬೃಹತ್ ಗುರಿಯನ್ನು ನೀಡಿದೆ.

ದುಬೈ; ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡ ಹಾಂಗ್ ಕಾಂಗ್ ಗೆ ಗೆಲ್ಲಲು 193 ರನ್ ಗಳ ಬೃಹತ್ ಗುರಿಯನ್ನು ನೀಡಿದೆ.
ಟಾಸ್ ಗೆದ್ದು ಭಾರತವನ್ನು ಬ್ಯಾಟಿಂಗ್ ಗೆ ಕಳುಹಿಸಿದ ಹಾಂಗ್ ಕಾಂಗ್ ನಾಯಕ ನಿಜಾಕತ್ ಖಾನ್ ಲೆಕ್ಕಾಚಾರವನ್ನು ಅಕ್ಷರಶಃ ಭಾರತೀಯ ಬ್ಯಾಟರ್ ಗಳು ಉಲ್ಟಾ ಮಾಡಿದರು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಜೋಡಿ ಮೊದಲ ವಿಕೆಟ್ ಗೆ 38 ರನ್ ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ 21 ರನ್ ಗಳಿಸಿದ್ದ ರೋಹಿತ್ ಶರ್ಮಾ ಆಯುಶ್ ಶುಕ್ಲಾ ಬೌಲಿಂಗ್ ನಲ್ಲಿ ಔಟಾದರು. ಬಳಿಕ ರಾಹುಲ್ ಜೊತೆಗೂಡಿದ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಜೋಡಿ ಅರ್ಧಶತಕದ ಜೊತೆಯಾಟ ನೀಡಿ ಭಾರತಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


