ಬಾಂಗ್ಲಾದೇಶ ವಿರುದ್ಧ ಏಕದಿನ ಸರಣಿ: ಮೊದಲ ಪಂದ್ಯದಲ್ಲಿ ಕೇವಲ 186 ರನ್ ಗಳಿಗೆ ಭಾರತ ಆಲೌಟ್!
ಬಾಂಗ್ಲಾದೇಶ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 41.2 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 186 ರನ್ ಗಳಿಸಿದೆ.

ಮೀರಪುರ್: ಇತ್ತೀಚಿಗೆ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಕಳೆದುಕೊಂಡಿದ್ದ ಭಾರತದ ಕಳಪೆ ಪ್ರದರ್ಶನ ಬಾಂಗ್ಲಾದೇಶದಲ್ಲೂ ಮುಂದುವರೆದಿದೆ. ಇಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 41.2 ಓವರ್ ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 186 ರನ್ ಗಳಿಸಿದೆ.
ಭಾರತ ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ನಾಯಕನ ನಿರ್ಧಾರಕ್ಕೆ ತಕ್ಕಂತೆ ಬಾಂಗ್ಲಾ ಆಟಗಾರರು ಆಟವಾಡಿದ್ದಾರೆ. ಅದರಲ್ಲೂ ಮಾರಕ ಬೌಲಿಂಗ್ ದಾಳಿ ನಡೆಸಿದ ಶಕೀಬ್ ಅಲ್ ಹಸನ್ ಐದು ವಿಕೆಟ್ ಕಬಳಿಸುವ ಮೂಲಕ ಭಾರತಕ್ಕೆ ಕಂಟಕವಾಗಿ ಪರಿಣಮಿಸಿದರು.
ಭಾರತದ ಪರ ಕೆಎಲ್ ರಾಹುಲ್ ಹೊರತುಪಡಿಸಿದರೆ ಉಳಿದ ಯಾವುದೇ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲಲಿಲ್ಲ. ನಾಯಕ ರೋಹಿತ್ ಶರ್ಮಾ 27 ರನ್ ಗಳಿಸಿದರೆ, ಶಿಖರ್ ಧವನ್ 7, ವಿರಾಟ್ ಕೊಹ್ಲಿ 9, ಶ್ರೇಯಸ್ ಅಯ್ಯರ್ 24, ವಾಷಿಂಗ್ಟನ್ ಸುಂದರ್ 19, ಶಾರ್ದೂಲ್ ಠಾಕೂರ್ 2, ಮೊಹಮ್ಮದ್ ಸಿರಾಜು 9, ಕುಲದೀಪ್ ಸೇನ್ ಕೇವಲ 2 ರನ್ ಗಳಿಸಿದರು. ಇದರಿಂದಾಗಿ ಕೇವಲ 186 ರನ್ ಗಳಿಗೆ ಟೀಂ ಇಂಡಿಯಾ ಆಲ್ ಔಟ್ ಆಯಿತು. ಪ್ರಸ್ತುತ ಬಾಂಗ್ಲಾದೇಶ ಬ್ಯಾಟಿಂಗ್ ಮುಂದುವರೆಸಿದ್ದು, 5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 15 ರನ್ ಗಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


