ಕ್ರಿಕೆಟ್

ಇಶಾನ್ ಕಿಶನ್: ದ್ವಿಶತಕ ಸಿಡಿಸಿದ ನಾಲ್ಕನೇ ಭಾರತೀಯ, ಜಗತ್ತಿನ 7ನೇ ಆಟಗಾರ

ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಮೂಲಕ ದ್ವಿಶತಕ ಸಾಧನೆ ಮಾಡಿದ ಇಶಾನ್ ಕಿಶನ್ ದಾಖಲೆ ನಿರ್ಮಿಸಿದ್ದು, ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಮತ್ತು ಜಗತ್ತಿನ 9ನೇ ಅಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಇಶಾನ್ ಕಿಶನ್: ದ್ವಿಶತಕ ಸಿಡಿಸಿದ ನಾಲ್ಕನೇ ಭಾರತೀಯ, ಜಗತ್ತಿನ 7ನೇ ಆಟಗಾರ
ಇಶಾನ್ ಕಿಶನ್
Published On :

ಚಟ್ಟೋಗ್ರಾಮ್: ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಮೂಲಕ ದ್ವಿಶತಕ ಸಾಧನೆ ಮಾಡಿದ ಇಶಾನ್ ಕಿಶನ್ ದಾಖಲೆ ನಿರ್ಮಿಸಿದ್ದು, ಈ ಸಾಧನೆ ಮಾಡಿದ ಭಾರತದ ನಾಲ್ಕನೇ ಮತ್ತು ಜಗತ್ತಿನ 9ನೇ ಅಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೊಘ ಬ್ಯಾಟಿಂಗ್ ಪ್ರದರ್ಶಿಸಿದೆ. ಅದರಲ್ಲೂ ರೋಹಿತ್ ಶರ್ಮಾ ಅಲಭ್ಯತೆಯ ಹಿನ್ನೆಲೆಯಲ್ಲಿ ಅವಕಾಶ ಪಡೆದುಕೊಂಡ ಇಶಾನ್ ಕಿಶನ್ ತಮ್ಮ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದು ದಾಖಲೆಯ ದ್ವಿಶತಕ ಸಿಡಿಸಿದ್ದಾರೆ. ಈ ಮೂಲಕ ದಿಗ್ಗಜ ಕ್ರಿಕೆಟಿಗರ ಸಾಲಿಗೆ ಸೇರಿದ್ದಾರೆ. 

ದ್ವಿಶತಕ ಸಿಡಿಸಿದ ನಾಲ್ಕನೇ ಭಾರತೀಯ
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದ್ವಿಶತಕವನ್ನು ಸಿಡಿಸಿದ ನಾಲ್ಕನೇ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ ಇಶಾನ್ ಕಿಶನ್. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್ ಹಾಗೂ ರೋಹಿತ್ ಶರ್ಮಾ ಈ ಸಾಧನೆಯನ್ನು ಮಾಡಿದ್ದರು. ಈ ಪೈಕಿ ವೀರೇಂದ್ರ ಸೆಹ್ವಾಗ್, ಹಾಗೂ ಸಚಿನ್ ತೆಂಡೂಲ್ಕರ್ ಒಂದು ದ್ವಿಶತಕ ಸಿಡಿಸಿದ್ದರೆ ರೋಹಿತ್ ಶರ್ಮಾ ಹೆಸರಿನಲ್ಲಿ ಮೂರು ದ್ವಿಶತಕಗಳಿದೆ. ಒಟ್ಟಾರೆಯಾಗಿ ಭಾರತದ ಪರ ದಾಖಲಾದ ಆರನೇ ದ್ವಿಶತಕ ಇದು ಎಂಬುದು ಮತ್ತೊಂದು ಗಮನಾರ್ಹ ಅಂಶ.

ಜಗತ್ತಿನ 7ನೇ ಆಟಗಾರ
ಇನ್ನು ಜಾಗತಿಕ ಕ್ರಿಕೆಟ್ ನಲ್ಲಿ ದ್ವಿಶತಕ ಸಿಡಿಸಿದ 7ನೇ ಆಟಗಾರ ಎಂಬ ಕೀರ್ತಿಗೂ ಇಶಾನ್ ಕಿಶನ್ ಭಾಜನರಾಗಿದ್ದು, ಇದಕ್ಕೂ ಮೊದಲು ಭಾರತದ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ನ್ಯೂಜಿಲೆಂಡ್ ನ ಮಾರ್ಟಿನ್ ಗಪ್ಟಿಲ್, ವಿಂಡೀಸ್ ನ ಕ್ರಿಸ್ ಗೇಯ್ಲ್ ಮತ್ತು ಪಾಕಿಸ್ತಾನದ ಫಖರ್ ಜಮಾನ್ ದ್ವಿಶತಕ ಸಿಡಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. 

Story image

ಜಾಗತಿಕ ಏಕದಿನ ಕ್ರಿಕೆಟ್ ನಲ್ಲಿ ಈ ವರೆಗೂ 9 ದ್ವಿಶತಕಗಳು ದಾಖಲಾಗಿದ್ದು ಈ ಪೈಕಿ ಭಾರತದ ರೋಹಿತ್ ಶರ್ಮಾ 3 ಬಾರಿ ಈ ಸಾಧನೆ ಮಾಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.