ಪಿಸಿಬಿ ಅಧ್ಯಕ್ಷ ಸ್ಥಾನದಿಂದ ರಮೀಜ್ ರಾಜಾಗೆ ಗೇಟ್ಪಾಸ್! ಇವರೇ ನೋಡಿ ಪಾಕ್ ಕ್ರಿಕೆಟ್‌ನ ಹೊಸ ಅಧ್ಯಕ್ಷರು!
2022ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿನ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಅಧ್ಯಕ್ಷ ರಮೀಜ್ ರಾಜಾ ಕುರ್ಚಿಯನ್ನು ಕಸಿದುಕೊಳ್ಳಲಿದ್ದಾರೆ. ಇದೀಗ ರಮೀಜ್ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಸಕಲ ಸಿದ್ಧತೆಗಳು ನಡೆಯುತ್ತಿವೆ.

2022ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಸೋಲಿನ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಅಧ್ಯಕ್ಷ ರಮೀಜ್ ರಾಜಾ ಕುರ್ಚಿಯನ್ನು ಕಸಿದುಕೊಳ್ಳಲಿದ್ದಾರೆ. ಇದೀಗ ರಮೀಜ್ ಅವರನ್ನು ಹುದ್ದೆಯಿಂದ ವಜಾಗೊಳಿಸಲು ಸಕಲ ಸಿದ್ಧತೆಗಳು ನಡೆಯುತ್ತಿವೆ.
ಮೂಲಗಳ ಪ್ರಕಾರ, ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ನಜಮ್ ಸೇಥಿ ಅವರನ್ನು ಪ್ರಬಲ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ನಜಮ್ ಸೇಥಿ ಶೀಘ್ರದಲ್ಲೇ ಪಿಸಿಬಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಜಮ್ ಸೇಥಿ ಇಂದು ಲಾಹೋರ್‌ನಲ್ಲಿ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಅವರನ್ನು ಭೇಟಿಯಾಗಿದ್ದರು.
ಮೂಲಗಳ ಪ್ರಕಾರ, 2014ರ ಪಿಸಿಬಿಯ ಸಂವಿಧಾನವನ್ನು ಮರುಸ್ಥಾಪಿಸಬೇಕು. ಅದರ ಪುನಃಸ್ಥಾಪನೆಯ ನಂತರ, ವಿಭಾಗೀಯ ಕ್ರೀಡೆಗಳನ್ನು ಪುನರುಜ್ಜೀವನಗೊಳಿಸಲಾಗುತ್ತದೆ. ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದ ಆದೇಶವನ್ನು ಅಂತರ ಪ್ರಾಂತೀಯ ಸಮನ್ವಯ ಸಚಿವಾಲಯದ (ಐಪಿಸಿ) ಕಾರ್ಯದರ್ಶಿ ಪ್ರಧಾನಿ ನಿವಾಸಕ್ಕೆ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
2022ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತಾಗಿನಿಂದ, ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ ತಂಡದ ಆಯ್ಕೆಗಾಗಿ ಸಾಕಷ್ಟು ಟೀಕೆಗೆ ಒಳಗಾಗಿದ್ದಾರೆ. 2014ರ ಪಿಸಿಬಿ ಸಂವಿಧಾನವನ್ನು ಮರುಸ್ಥಾಪಿಸಲು ಪ್ರಧಾನಿ ಆದೇಶಿಸಬಹುದು ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನದ ಮಾಜಿ ನಾಯಕ ಮತ್ತು 1992ರ ವಿಶ್ವಕಪ್ ವಿಜೇತ ತಂಡದ ಸದಸ್ಯ, ರಮೀಜ್ ರಾಜಾ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಮೂರು ವರ್ಷಗಳ ಅವಧಿಗೆ ಪಿಸಿಬಿಯ 36ನೇ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಇನ್ನು ಮಾಜಿ ನಾಯಕ ಇಮ್ರಾನ್ ಖಾನ್ ಪಾಕ್ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬೆನ್ನಲ್ಲೇ 2108ರಲ್ಲಿ ಸೇಥಿ ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಸೇಥಿ ಅವರನ್ನು ಮೂರು ವರ್ಷಗಳ ಅವಧಿಗೆ 2017ರಲ್ಲಿ ಪಿಸಿಬಿ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಆದರೆ, ಇಮ್ರಾನ್ ಖಾನ್ ಜೊತೆಗಿನ ಸಂಬಂಧ ಹಳಸಿದ ಕಾರಣ ಅವರನ್ನು ಶೀಘ್ರದಲ್ಲೇ ಹುದ್ದೆಯಿಂದ ತೆಗೆದುಹಾಕಲಾಯಿತು. ಸೇಥಿ ಅವರು 2013 ಮತ್ತು 2014ರಲ್ಲಿ ಪಿಸಿಬಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


