ಪಾಕಿಸ್ತಾನಕ್ಕೆ ತವರಿನಲ್ಲೇ ತೀವ್ರ ಮುಖಭಂಗ: 3ನೇ ಪಂದ್ಯವನ್ನೂ ಗೆದ್ದ ಇಂಗ್ಲೆಂಡ್, ಟೆಸ್ಟ್ ಸರಣಿ ಕ್ಲೀನ್ ಸ್ವೀಪ್
ಆತಿಥೇಯ ಪಾಕಿಸ್ತಾನ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲೂ ಗೆಲುವಿನ ನಗೆ ಬೀರಿರುವ ಇಂಗ್ಲೆಂಡ್ ತಂಡ, ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.

ಕರಾಚಿ: ಆತಿಥೇಯ ಪಾಕಿಸ್ತಾನ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲೂ ಗೆಲುವಿನ ನಗೆ ಬೀರಿರುವ ಇಂಗ್ಲೆಂಡ್ ತಂಡ, ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.
ಹೌದು.. ಇಲ್ಲಿನ ನ್ಯಾಷನಲ್ ಸ್ಟೇಡಿಯಂನಲ್ಲಿ ಶನಿವಾರ (ಡಿಸೆಂಬರ್ 17) ಆರಂಭವಾದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ, ಮೊದಲ ಇನಿಂಗ್ಸ್‌ನಲ್ಲಿ 304 ರನ್ ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಇಂಗ್ಲೆಂಡ್ 354 ರನ್ ಗಳಿಸಿ 50 ರನ್ ಅಂತರದ ಮುನ್ನಡೆ ಸಾಧಿಸಿತ್ತು. ಬಳಿಕ ಎರಡನೇ ಇನಿಂಗ್ಸ್ ಆರಂಭಿಸಿದ ಬಾಬರ್ ಅಜಂ ಬಳಗ 216 ರನ್ ಗಳಿಗೆ ಸರ್ವಪತನ ಕಂಡಿತು. 166 ರನ್‌ಗಳ ಸುಲಭ ಗುರಿ ಬೆನ್ನತ್ತಿದ ಆಂಗ್ಲರ ನಾಡಿನ ತಂಡ ಕೇವಲ 2 ವಿಕೆಟ್ ಕಳೆದುಕೊಂಡು 170 ರನ್ ಗಳಿಸಿತು.
ಇದರೊಂದಿಗೆ ಪಾಕ್ ಪಡೆ, ತವರಿನಲ್ಲೇ ಮುಖಭಂಗ ಅನುಭವಿಸಿತು. ರಾವಲ್ಪಿಂಡಿಯಲ್ಲಿ ನಡೆದ ಮೊದಲ ಪಂದ್ಯವನ್ನು 74 ರನ್‌ಗಳಿಂದ ಗೆದ್ದಿದ್ದ ಬೆನ್ ಸ್ಟೋಕ್ಸ್ ಬಳಗ, ಮುಲ್ತಾನ್‌ನಲ್ಲಿ ಆಡಿದ ಎರಡನೇ ಪಂದ್ಯವನ್ನು 26 ರನ್ ಅಂತರದಿಂದ ಜಯಿಸಿತ್ತು. ಇದೀಗ ಮೂರನೇ ಪಂದ್ಯವನ್ನೂ ಗೆಲ್ಲುವ ಮೂಲಕ 3 ಪದ್ಯಗಳ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಆ ಮೂಲಕ ಪಾಕಿಸ್ತಾನಕ್ಕೆ ತವರಿನಲ್ಲೇ ಇಂಗ್ಲೆಂಡ್ ತಂಡ ಮುಖಭಂಗಕ್ಕೀಡಾಗುವಂತೆ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


