ಕ್ರಿಕೆಟ್

'ಔಟ್ ಆಫ್ ಡೇಂಜರ್': ರಿಷಭ್ ಪಂತ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ

ಡೆಹ್ರಾಡೂನ್ ಹೆದ್ದಾರಿಯಲ್ಲಿ ಶುಕ್ರವಾರ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಚಲಾಯಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಪಂತ್ ಜೀವಾಪಾಯದಿಂದ ಪಾರಾಗಿದ್ದಾರೆ.

'ಔಟ್ ಆಫ್ ಡೇಂಜರ್': ರಿಷಭ್ ಪಂತ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ
ರಿಷಭ್ ಪಂತ್
Published On :

ದೆಹಲಿ: ಡೆಹ್ರಾಡೂನ್ ಹೆದ್ದಾರಿಯಲ್ಲಿ ಶುಕ್ರವಾರ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಚಲಾಯಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದ್ದು ಪಂತ್ ಜೀವಾಪಾಯದಿಂದ ಪಾರಾಗಿದ್ದಾರೆ.

ರಿಷಭ್ ಪಂತ್ ಅವರ ಆರೋಗ್ಯದ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜಯ್ ಶಾ, “ನಾನು ಅವರ ಕುಟುಂಬ ಮತ್ತು ಚಿಕಿತ್ಸೆ ನೀಡುವ ವೈದ್ಯರೊಂದಿಗೆ ಮಾತನಾಡಿದ್ದೇನೆ. ರಿಷಭ್ ಆರೋಗ್ಯ ಸ್ಥಿರವಾಗಿದ್ದು, ಸ್ಕ್ಯಾನ್ ಮಾಡಲಾಗುತ್ತಿದೆ. ನಾವು ಅವರ ಪ್ರಗತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅವರಿಗೆ ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತೇವೆ” ಎಂದು ಅವರು ಹೇಳಿದ್ದಾರೆ.

ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಪಂತ್ ಗಾಯಗೊಂಡಿದ್ದಾರೆ. ರೂರ್ಕಿಯಲ್ಲಿರುವ ತನ್ನ ಮನೆಗೆ ಪಂತ್ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಸದ್ಯ ಡೆಹ್ರಾಡೂನ್‌ ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಂತ್ ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.