ಎರಡನೇ ಟಿ20: ಇಂಗ್ಲೆಂಡ್ ಗೆ 171 ರನ್ ಗುರಿ ನೀಡಿದ ಭಾರತ
ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ 2 ನೇ ಟಿ20 ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿದೆ.

ಬರ್ಮಿಂಗ್ಹ್ಯಾಮ್: ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ 2 ನೇ ಟಿ20 ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 170 ರನ್ ಗಳಿಸಿದೆ.
ಇಂಗ್ಲೆಂಡ್ ಗೆ 171 ರನ್ ಗಳ ಸ್ಪರ್ಧಾತ್ಮಕ ಗುರಿಯನ್ನು ಭಾರತ ನೀಡಿದೆ.
ಟಾಸ್ ಗೆ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಿದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ (20 ಎಸೆತಗಳಲ್ಲಿ 31 ರನ್) ಹಾಗೂ ರಿಷಭ್ ಪಂತ್ (15 ಎಸೆತಗಳಲ್ಲಿ 26 ರನ್) ಗಳಿಸಿ ಉತ್ತಮ ಆರಂಭ ನೀಡಿದರು.
ಕೋಹ್ಲಿ ಆದಿಯಾಗಿ ನಂತರ ಬಂದ ಬ್ಯಾಟ್ಸ್ಮನ್ ಗಳು ಇಂಗ್ಲೆಂಡ್ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿಲ್ಲ. ಆದರೆ ರವೀಂದ್ರ ಜಡೇಜ 29 ಎಸೆತಗಳಲ್ಲಿ ಅಜೇಯ 46 ರನ್ ಗಳನ್ನು ಗಳಿಸುವ ಮೂಲಕ ತಂಡ ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ನೆರವಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


