1st ODI: ಟೀಂ ಇಂಡಿಯಾ ವೇಗಿ ಬುಮ್ರಾ 5 ವಿಕೆಟ್; 4 ಡಕೌಟ್, ಇಂಗ್ಲೆಂಡ್ 110ಕ್ಕೆ ಆಲೌಟ್!
ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ಮೊದಲ ಏಕದಿನ ಪಂದ್ಯದಲ್ಲಿ 110 ರನ್ ಗಳಿಗೆ ಆಲೌಟ್ ಆಗಿದೆ.

ಲಂಡನ್: ಟೀಂ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ತಂಡ ಮೊದಲ ಏಕದಿನ ಪಂದ್ಯದಲ್ಲಿ 110 ರನ್ ಗಳಿಗೆ ಆಲೌಟ್ ಆಗಿದೆ.
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಜೇಸನ್ ರಾಯ್ ಶೂನ್ಯ ಸುತ್ತಿದರೆ, ಜಾನಿ ಬೇರ್ ಸ್ಟೋ 7 ರನ್ ಗಳಿಸಿ ಬುಮ್ರಾ ಬೌಲಿಂಗ್ ನಲ್ಲಿ ಔಟಾದರು. ಜೋ ರೂಟ್ ಕೂಡ ಬುಮ್ರಾ ಬೌಲಿಂಗ್ ನಲ್ಲೇ ಶೂನ್ಯಕ್ಕೆ ನಿರ್ಗಮಿಸಿದ್ದು ತಂಡಕ್ಕೆ ಮಾರಕವಾಗಿ ಪರಿಣಮಿಸಿತು. ಬಳಿಕ ನಾಯಕ ಬೆನ್ ಸ್ಟೋಕ್ ರನ್ನು ಶಮಿ ಮೊದಲ ಎಸೆತದಲ್ಲೇ ಔಟ್ ಮಾಡಿದರು. ಬಳಿಕ ಕ್ರೀಸ್ ಗೆ ಆಗಮಿಸಿದ ಲಿಯಾಮ್ ಲಿವಿಂಗ್ ಸ್ಟೋನ್ ರನ್ನು ಬುಮ್ರಾ 8ನೇ ಓವರ್ ನ ಐದನೇ ಎಸೆತದಲ್ಲಿ ಕ್ಲೀನ್ ಬೋಲ್ಡ್ ಮಾಡಿದರು.
ಡೇವಿಡ್ ವಿಲ್ಲಿ 21 ರನ್ ಗಳಿಸಿ ತಂಡಕ್ಕೆ ಸ್ವಲ್ಪ ಚೇತರಿಕೆ ತಂದುಕೊಟ್ಟರು ಬುಮ್ರಾರ ಬೌಲಿಂಗ್ ಗೆ ಬೌಲ್ಡ್ ಆದರು. ಮೊಯಿನ್ ಅಲಿ 14 ರನ್ ಗಳಿಸಿ ಔಟಾದರೆ ಕಾರ್ಸೆ 15 ರನ್ ಗೆ ಔಟಾಗಿ ಪೆವಿಲಿಯನ್ ಸೇರಿದರು.
ಇನ್ನು ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಬುಮ್ರಾ 6 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ 3 ಹಾಗೂ ಪ್ರಸಿದ್ಧ್ ಕೃಷ್ಣ 1 ವಿಕೆಟ್ ಪಡೆದಿದ್ದಾರೆ.
ಟಿ20 ವಿಶ್ವಕಪ್‌ಗೂ ಮುನ್ನ ಭಾರತ ಆಡಲಿರುವ ಕೊನೆಯ ಏಕದಿನ ಸರಣಿ ಇದಾಗಿದ್ದು. 'ಮೂರು ಪಂದ್ಯಗಳ ಸರಣಿ ನಮಗೆ ಮಹತ್ವದ್ದಾಗಿದೆ' ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಕೆನ್ನಿಂಗ್ಟನ್‌ನ ಓವಲ್‌ನಲ್ಲಿ ನಡೆಯುತ್ತಿದೆ. ಗಾಯದ ಸಮಸ್ಯೆಗೆ ಸಿಲುಕಿರುವ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


