ಕ್ರಿಕೆಟ್

2ನೇ ಏಕದಿನ ಪಂದ್ಯ: ಇಂಗ್ಲೆಂಡ್ ನಿಂದ ಭಾರತಕ್ಕೆ 247 ರನ್ ಗುರಿ

ಇಂಗ್ಲೆಂಡ್ ನ ಲಾರ್ಡ್ಸ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್-ಭಾರತ ನಡುವಿನ 2 ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು 49 ಓವರ್ ಗಳಲ್ಲಿ 246 ರನ್ ಗಳಿಗೆ ಕಟ್ಟಿ ಹಾಕಿದೆ.

2ನೇ ಏಕದಿನ ಪಂದ್ಯ: ಇಂಗ್ಲೆಂಡ್ ನಿಂದ ಭಾರತಕ್ಕೆ 247 ರನ್ ಗುರಿ
ಭಾರತ-ಇಂಗ್ಲೆಂಡ್ 2 ನೇ ಏಕದಿನ ಪಂದ್ಯ
Published On :

ಲಾರ್ಡ್ಸ್: ಇಂಗ್ಲೆಂಡ್ ನ ಲಾರ್ಡ್ಸ್ ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್-ಭಾರತ ನಡುವಿನ 2 ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು 49 ಓವರ್ ಗಳಲ್ಲಿ 246 ರನ್ ಗಳಿಗೆ ಕಟ್ಟಿ ಹಾಕಿದೆ.
 
ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ಬೌಲರ್ ಗಳು ಆರಂಭದಿಂದಲೂ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಪರಿಣಾಮ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರರಾದ ಜೇಸನ್ ರಾಯ್ (33 ಎಸೆತಗಳಲ್ಲಿ 23 ರನ್) ಜಾನಿ ಬೈರ್ಸ್ಟೋವ್ (38 ಎಸೆತಗಳಲ್ಲಿ 38 ರನ್) ವೇಗವಾಗಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ನತ್ತ ನಡೆದರು. 

ನಂತರ ಮಧ್ಯ ಕ್ರಮಾಂಕದ ಬ್ಯಾಟ್ಸ್ಮನ್ ಗಳು ಹಾಗೂ ಕಡೆಯ ಕ್ರಮಾಂಕದ ಬ್ಯಾಟ್ಸ್ ಮನ್ ಗಳು ಭಾರತದ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿಲ್ಲ. 

ಭಾರತದ ಪರ ಮೊಹಮ್ಮದ್ ಶಮಿ, 48 ರನ್ ನೀಡಿ 1 ವಿಕೆಟ್ ಪಡೆದರೆ, ಜಸ್ಪ್ರೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.