2ನೇ ಒಡಿಐ: ಭಾರತದ ವಿರುದ್ಧ ಇಂಗ್ಲೆಂಡ್ ಗೆ 100 ರನ್ ಗಳ ಜಯ
ಲಾರ್ಡ್ಸ್ ನಲ್ಲಿ ನಡೆದ 2 ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆ 100 ರನ್ ಗಳ ಜಯ ದೊರೆತಿದೆ.

ಲಾರ್ಡ್ಸ್: ಲಾರ್ಡ್ಸ್ ನಲ್ಲಿ ನಡೆದ 2 ನೇ ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆ 100 ರನ್ ಗಳ ಜಯ ದೊರೆತಿದೆ.
ಈ ಗೆಲುವಿನ ಮೂಲಕ ಸರಣಿಯಲ್ಲಿ ಇಂಗ್ಲೆಂಡ್ ಭಾರತದೊಂದಿಗೆ ಸಮಬಲ ಸಾಧಿಸಿದ್ದು, ಉಭಯ ತಂಡಗಳೂ ತಲಾ ಒಂದು ಪಂದ್ಯಗಳನ್ನು ಗೆದ್ದಿವೆ.ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ ಇಂಗ್ಲೆಂಡ್ ತಂಡವನ್ನು 49 ಓವರ್ ಗಳಲ್ಲಿ 246 ರನ್ ಗಳಿಗೆ ಕಟ್ಟಿಹಾಕಿತು.
247 ರನ್ ಗಳ ಗುರಿಯನ್ನು ಬೆನ್ನಟ್ಟಿದ ಭಾರತದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ (10 ಎಸೆತಗಳಲ್ಲಿ 0 ರನ್) ಶಿಖರ್ ಧವನ್ (26 ಎಸೆತಗಳಲ್ಲಿ 9 ರನ್) ಮುಗ್ಗರಿಸಿದ ಪರಿಣಾಮ ಭಾರತ ತಂಡ ಆರಂಭಿಕ ಅಘಾತ ಎದುರಿಸಬೇಕಾಯಿತು.
ನಂತರ ವಿರಾಟ್ ಕೊಹ್ಲಿ (25ಎಸೆತಗಳಲ್ಲಿ 16 ರನ್) ಸಹ ನಿರಾಶೆ ಮೂಡಿಸಿದರು. ರಿಷಭ್ ಪಂತ್ ಸೇರಿದಂತೆ ಮಧ್ಯಮ ಕ್ರಮಾಂಕ ಹಾಗೂ ಕಡೆಯ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದ ಪರಿಣಾಮ ಭಾರತ 38.5 ಓವರ್ ಗಳಲ್ಲಿ 146 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡು ಇಂಗ್ಲೆಂಡ್ ವಿರುದ್ಧ ಸೋಲೊಪ್ಪಿಕೊಂಡಿತು. ರೀಸ್ ಟೋಪ್ಲಿ 24 ರನ್ ಗಳನ್ನು ನೀಡಿ 2 ಮೇಡ್ ಇನ್ ಓವರ್, 6 ವಿಕೆಟ್ ಗಳನ್ನು ಪಡೆದು ಇಂಗ್ಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


