ಆರ್ಥಿಕ ಬಿಕ್ಕಟ್ಟು: ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಯುಎಇಗೆ ಸ್ಥಳಾಂತರ ಸಾಧ್ಯತೆ
ಆರ್ಥಿಕ ಬಿಕ್ಕಟ್ಟು ನಾಗರೀಕ ಸಂಘರ್ಷದಿಂದಾಗಿ ಅಸ್ಥಿರದಲ್ಲಿರುವ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.

ಕೊಲಂಬೊ: ಆರ್ಥಿಕ ಬಿಕ್ಕಟ್ಟು ನಾಗರೀಕ ಸಂಘರ್ಷದಿಂದಾಗಿ ಅಸ್ಥಿರದಲ್ಲಿರುವ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾಕಪ್ 2022 ಕ್ರಿಕೆಟ್ ಟೂರ್ನಿ ಯುಎಇಗೆ ಸ್ಥಳಾಂತರವಾಗುವ ಸಾಧ್ಯತೆ ಇದೆ.
ರಾಜಕೀಯ ಅಸ್ಥಿರತೆ, ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಏಷ್ಯಾ ಕಪ್ ಟೂರ್ನಿಯನ್ನು ಶ್ರೀಲಂಕಾದಿಂದ ಸ್ಥಳಾಂತರಿಸುವ ಸಾಧ್ಯತೆಯಿದೆ ಎಂದು ಶ್ರೀಲಂಕಾ ಕ್ರಿಕೆಟ್ ಸಂಸ್ಥೆಯ (ಎಸ್‌ಎಲ್‌ಸಿ) ಕಾರ್ಯದರ್ಶಿ ಮೋಹನ್ ಡಿ ಸಿಲ್ವಾ ಭಾನುವಾರ ಹೇಳಿದ್ದಾರೆ. ಟೂರ್ನಿಯನ್ನು ಯುಎಇಯಲ್ಲಿ ಆಯೋಜಿಸುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದರು.
ಈ ಬಾರಿ ಟಿ 20 ಮಾದರಿಯಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಪಂದ್ಯಾವಳಿಯ ಸ್ಥಳದಲ್ಲಿನ ಸಂಭವನೀಯ ಬದಲಾವಣೆಯ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಎಸ್‌ಎಲ್‌ಸಿ ಕಾರ್ಯದರ್ಶಿ ಡಿ ಸಿಲ್ವಾ, ‘ಏಷ್ಯಾ ಕಪ್ ಯುಎಇಯಲ್ಲಿ ನಡೆಯುವ ಸಾಧ್ಯತೆಯಿದೆ’ ಎಂದು ತಿಳಿಸಿದರು.
ತೀವ್ರ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಸೆಣಸುತ್ತಿರುವ ಶ್ರೀಲಂಕಾದಲ್ಲಿ ವಾರದಿಂದ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆದಿವೆ. ಈ ಮಧ್ಯೆ, ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಮಿಲಿಟರಿ ಜೆಟ್‌ನಲ್ಲಿ ದೇಶದಿಂದ ಪಲಾಯನ ಮಾಡಿದ್ದು, ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡುವಂತೆ ಮಾಡಿದೆ.
ಟೂರ್ನಿಯ ವೇಳಾಪಟ್ಟಿ ನಿಗದಿಯಂತೆ ನಡೆಯಲಿದ್ದು, ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ. ಆಗಸ್ಟ್ 26 ರಿಂದ ಸೆಪ್ಟೆಂಬರ್ 11 ರವರೆಗೆ ಇರಲಿದೆ ಎಂದು ಅವರು ಹೇಳಿದರು.
ಭಾರತ, ಪಾಕಿಸ್ತಾನ, ಶ್ರೀಲಂಕಾ, ಅಫ್ಗಾನಿಸ್ತಾನ, ಮತ್ತು ಬಾಂಗ್ಲಾದೇಶ ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


