ಕ್ರಿಕೆಟ್

2ನೇ ಏಕದಿನ: ಭಾರತಕ್ಕೆ ಗೆಲ್ಲಲು 312 ರನ್ ಗಳ ಬೃಹತ್ ಗುರಿ ನೀಡಿದ ವೆಸ್ಟ್ ಇಂಡೀಸ್

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಧವನ್ ಪಡೆಗೆ 312 ರನ್ ಗಳ ಬೃಹತ್ ಗುರಿ ನೀಡಿದೆ.

2ನೇ ಏಕದಿನ: ಭಾರತಕ್ಕೆ ಗೆಲ್ಲಲು 312 ರನ್ ಗಳ ಬೃಹತ್ ಗುರಿ ನೀಡಿದ ವೆಸ್ಟ್ ಇಂಡೀಸ್
ವಿಂಡೀಸ್ ಬ್ಯಾಟಿಂಗ್
Published On :

ಕ್ವೀನ್ಸ್ ಪಾರ್ಕ್ ಓವಲ್: ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಧವನ್ ಪಡೆಗೆ 312 ರನ್ ಗಳ ಬೃಹತ್ ಗುರಿ ನೀಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 311ರನ್ ಗಳಿಸಿದೆ. ವಿಂಡೀಸ್ ಪರ ಆರಂಭಿಕ ಆಟಗಾರ ಶಾಯ್ ಹೋಪ್ 11 ರನ್ ಗಳಿಸಿ ತಂಡದ ಬೃಹತ್ ಮೊತ್ತದಲ್ಲಿ ಮಹತ್ವ ಪಾತ್ರವಹಿಸಿದರು. ಅವರಿಗೆ ಉತ್ತಮ ಸಾಥ್ ನೀಡಿದ ಮೇಯರ್ಸ್ 39ರನ್ ಗಳಿಸಿದರೆ, ಬಳಿಕ ಕ್ರೀಸ್ ಗೆ ಆಗಮಿಸಿದ ಬ್ರೂಕ್ಸ್ 36ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇದೇ ವೇಳೆ ಕಿಂಗ್ಸ್ ಶೂನ್ಯಕ್ಕೆ ಔಟಾದಾಗ ಭಾರತ ಮೇಲುಗೈ ಸಾಧಿಸಿತ್ತು.

ಆದರೆ ಈ ಹಂತದಲ್ಲಿ ಹೋಪ್ ಜೊತೆಗೂಡಿದ ನಾಯಕ ಪೂರನ್ (74 ರನ್) ವಿಂಡೀಸ್ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು. ಅಂತಿಮವಾಗಿ ವಿಂಡೀಸ್ ತಂಡ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 311ರನ್ ಗಳಿಸಿ, ಭಾರತಕ್ಕೆ ಗೆಲ್ಲಲು 312 ರನ್ ಗುರಿ ನೀಡಿದೆ.

ಭಾರತದ ಪರ ಶಾರ್ದೂಲ್ ಠಾಕೂರ್ ಮೂರು ವಿಕೆಟ್ ಪಡೆದರೆ, ಹೂಡಾ, ಅಕ್ಸರ್ ಪಟೇಲ್ ಮತ್ತು ಚಹಲ್ ತಲಾ ಒಂದು ವಿಕೆಟ್ ಪಡೆದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.