ಕ್ರಿಕೆಟ್

ಐಸಿಸಿ ಏಕದಿನ ಕ್ರಿಕೆಟ್ ತಂಡ ರ್‍ಯಾಂಕಿಂಗ್‌: 3ನೇ ಸ್ಥಾನ ಮತ್ತಷ್ಟು ಭದ್ರಪಡಿಸಿಕೊಂಡ ಭಾರತ

ವಿಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ದಾಖಲೆಯ ವೈಟ್ ವಾಶ್ ಮೂಲಕ ಕೈವಶ ಮಾಡಿಕೊಳ್ಳುವ ಮೂಲಕ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ತನ್ನ ಮೂರನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ಐಸಿಸಿ ಏಕದಿನ ಕ್ರಿಕೆಟ್ ತಂಡ ರ್‍ಯಾಂಕಿಂಗ್‌: 3ನೇ ಸ್ಥಾನ ಮತ್ತಷ್ಟು ಭದ್ರಪಡಿಸಿಕೊಂಡ ಭಾರತ
ಭಾರತ ತಂಡ
Published On :

ದುಬೈ: ವಿಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ದಾಖಲೆಯ ವೈಟ್ ವಾಶ್ ಮೂಲಕ ಕೈವಶ ಮಾಡಿಕೊಳ್ಳುವ ಮೂಲಕ ಭಾರತ ಕ್ರಿಕೆಟ್ ತಂಡ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ತನ್ನ ಮೂರನೇ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

Story image

ಈ ಹಿಂದೆ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಗೆದ್ದು ರ್ಯಾಂಕಿಂಗ್‌ನಲ್ಲಿ ಪಾಕಿಸ್ತಾನವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ್ದ ಭಾರತ ತಂಡ ಇದೀಗ ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ವಿಂಡೀಸ್ ವಿರುದ್ಧದ ಸರಣಿ ಗೆಲುವಿನ ಮೂಲಕ ಭಾರತ ತಂಡ ತನ್ನ ತೆಕ್ಕೆಗೆ ಮತ್ತೊಂದು ಅಂಕ ಹಾಕಿಕೊಂಡಿದ್ದು ಆ ಮೂಲಕ ತನ್ನ ಅಂಕಗಳಿಕೆಯನ್ನು 110ಕ್ಕೇರಿಕೆ ಮಾಡಿಕೊಂಡಿದೆ. ಆ ಮೂಲಕ ತನ್ನ ಮೂರನೇ ಸ್ಥಾನವನ್ನು ಭಾರತ ತಂಡ ಮತ್ತಷ್ಟು ಭದ್ರಪಡಿಸಿಕೊಂಡಿದೆ.

ಭಾರತದ ಸಮೀಪದ ಪ್ರತಿಸ್ಪರ್ಧಿ ಪಾಕಿಸ್ತಾನ 106 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಮುಂದುವರೆದಿದ್ದು, 101 ಅಂಕಗಳೊಂದಿಗೆ ಆಸ್ಟ್ರೇಲಿಯಾ 5ನೇ ಸ್ಥಾನದಲ್ಲಿ ಮುಂದುವರೆದಿದೆ. ಉಳಿದಂತೆ 128 ಅಂಕಗಳೊಂದಿಗೆ ನ್ಯೂಜಿಲೆಂಡ್ ಅಗ್ರ ಸ್ಥಾನದಲ್ಲಿ, 119 ಅಂಕಗಳೊಂದಿಗೆ ಇಂಗ್ಲೆಂಡ್ 2ನೇ ಸ್ಥಾನದಲ್ಲಿ ಮುಂದುವರೆದಿವೆ. 101 ಅಂಕಗಳನ್ನು ಹೊಂದಿರುವ ದಕ್ಷಿಣ ಆಫ್ರಿಕಾ 6, 98 ಅಂಕಗಳನ್ನು ಹೊಂದಿರುವ ಬಾಂಗ್ಲಾದೇಶ 7. 92 ಅಂಕಗಳನ್ನು ಹೊಂದಿರುವ ಶ್ರೀಲಂಕಾ 8 ನೇ ಸ್ಥಾನದಲ್ಲಿವೆ.

ದಕ್ಷಿಣ ಆಫ್ರಿಕಾ ವಿರುದ್ಧ ತವರಿನ ಸರಣಿ ಸೇರಿ ಈವರೆಗೆ ಭಾರತ ತಂಡ ಈ ವರ್ಷ ಆಡಿರುವ 9 ಏಕದಿನ ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.