2ನೇ ಟಿ20 ಪಂದ್ಯ: ಭಾರತವನ್ನು 148 ರನ್ ಗಳಿಗೆ ಕಟ್ಟಿಹಾಕಿದ ದಕ್ಷಿಣ ಆಫ್ರಿಕಾ
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 148 ರನ್ ಬಾರಿಸಿದೆ.

ಕಟಕ್: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 148 ರನ್ ಬಾರಿಸಿದೆ.
ಕಟಕ್ ನಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 148 ರನ್ ಬಾರಿಸಿದ್ದು ಆಫ್ರಿಕಾಗೆ 149 ರನ್ ಗಳ ಗುರಿ ನೀಡಿದೆ.
ಭಾರತ ಪರ ಬ್ಯಾಟಿಂಗ್ ಆರಂಭಿಸಿದ ರಿತುರಾಜ್ ಗಾಯ್ಕವಾಡ್ 1 ರನ್ ಗೆ ಔಟಾದರೆ, ಇಶಾನ್ ಕಿಶನ್ 34 ರನ್ ಬಾರಿಸಿದರು. ನಂತರ ಬಂದ ಶ್ರೇಯಸ್ ಅಯ್ಯರ್ 40 ರನ್ ಸಿಡಿಸಿದರು. ಇನ್ನು ದಿನೇಶ್ ಕಾರ್ತಿಕ್ ಅಜೇಯ 30 ರನ್ ಹಾಗೂ ಹರ್ಷಲ್ ಪಟೇಲ್ ಅಜೇಯ 12 ರನ್ ಬಾರಿಸಿದ್ದಾರೆ.
ದಕ್ಷಿಣ ಆಫ್ರಿಕಾ ಪರ ಬೌಲಿಂಗ್ ನಲ್ಲಿ ಅನ್ರಿಚ್ ನಾರ್ಟ್ಜೆ 2, ಕಾಗಿಸೋ ರಬಾಡ, ಪರ್ನೆಲ್ ಮತ್ತು ಕೇಶವ್ ಮಹಾರಾಜ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


