ಪಾಕಿಸ್ತಾನ- ವೆಸ್ಟ್ ಇಂಡೀಸ್ ಮೂರನೇ ಏಕದಿನ ಪಂದ್ಯ, ಬಿರುಗಾಳಿಯಿಂದ ರದ್ದು
ತವರಿನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಪಾಕಿಸ್ತಾನ 3-0 ಅಂತರದಿಂದ ವಶಪಡಿಸಿಕೊಂಡಿದೆ. ನಿನ್ನೆ ಮುಲ್ತಾನ್ ನಲ್ಲಿ ನಡೆದ ಪಂದ್ಯದಲ್ಲಿ ಬಿರುಗಾಳಿ ಬೀಸಿದ್ದರಿಂದ ಪಾಕಿಸ್ತಾನ ಡಿ/ಎಲ್ ವಿಧಾನದಿಂದ ಪಂದ್ಯವನ್ನು ಗೆದ್ದುಕೊಂಡಿತು.

ಮುಲ್ತಾನ್: ತವರಿನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯನ್ನು ಪಾಕಿಸ್ತಾನ 3-0 ಅಂತರದಿಂದ ವಶಪಡಿಸಿಕೊಂಡಿದೆ. ನಿನ್ನೆ ಮುಲ್ತಾನ್ ನಲ್ಲಿ ನಡೆದ ಪಂದ್ಯದಲ್ಲಿ ಬಿರುಗಾಳಿ ಬೀಸಿದ್ದರಿಂದ ಪಾಕಿಸ್ತಾನ ಡಿ/ಎಲ್ ವಿಧಾನದಿಂದ ಪಂದ್ಯವನ್ನು ಗೆದ್ದುಕೊಂಡಿತು.
ಎರಡೂ ತಂಡಗಳು ಮೈದಾನದಲ್ಲಿದ್ದಾಗ ಭಾರಿ ಬಿರುಗಾಳಿ ಎದ್ದಿತ್ತು. ಆಟಗಾರರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮಾಸ್ಕ್ ಮತ್ತು ಕನ್ನಡಕಗಳನ್ನು ಧರಿಸಬೇಕಾಯಿತು. ಚಂಡಮಾರುತದ ಕಾರಣ ಮೈದಾನದಲ್ಲಿ ಗೋಚರತೆ ಗಣನೀಯವಾಗಿ ಕುಗ್ಗಿತ್ತು. ಈ ಸಂದರ್ಭದಲ್ಲಿ ಪಂದ್ಯವನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಲಾಯಿತು.
ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡುವಾಗ 269 ರನ್ ಗಳಿಸಿತು. ಈ ಪಂದ್ಯದಲ್ಲಿ ಇಮಾಮ್ -ಉಲ್ ಹಕ್ ಪಾಕ್ ಪರ 62 ರನ್ ಗಳಿಸಿದರು. ಆದರೆ, ನಾಯಕ ಬಾಬರ್ ಅಜಮ್ ಕೇವಲ 1 ರನ್ ಗಳಿಸಿದರು. ಈ ಸರಣಿಯನ್ನು ಪಾಕಿಸ್ತಾನ 3-0 ಅಂತರದಿಂದ ಗೆದ್ದುಕೊಂಡಿತು. ವೆಸ್ಟ್ ಇಂಡೀಸ್ ತಂಡ ಹೀನಾಯ ಸೋಲು ಅನುಭವಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


