ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ: 4ನೇ ಪಂದ್ಯ ಗೆದ್ದ ಟೀಂ ಇಂಡಿಯಾ; 2-2 ಸಮಬಲ; ಬೆಂಗಳೂರು ಪಂದ್ಯದ ಮೇಲೆ ಎಲ್ಲರ ಚಿತ್ತ!
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.

ರಾಜ್ಕೋಟ್: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.
ರಾಜ್ಕೋಟ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ ಬಾರಿಸಿತ್ತು. ಈ ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 87 ರನ್ ಗಳಿಗೆ ಸರ್ವಪತನ ಕಂಡಿದ್ದು 82 ರನ್ ಗಳಿಂದ ಟೀಂ ಇಂಡಿಯಾಗೆ ಶರಣಾಗಿದೆ.
ಅವೇಶ್ ಖಾನ್ ಆಕ್ರಮಣಕಾರಿ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾದ ಬ್ಯಾಟರ್ ಗಳು ಪೆವಿಲಿಯನ್ ಪರೇಡ್ ನಡೆಸಿದರು. ಅವೇಶ್ ಖಾನ್ 18 ರನ್ ನೀಡಿ 4 ವಿಕೆಟ್ ಪಡೆದಿದ್ದಾರೆ.
ದಕ್ಷಿಣ ಆಫ್ರಿಕಾ ಪರ ಬ್ಯಾಟಿಂಗ್ ಡಿಕಾಕ್ 14, ದುಸೇನ್ 20, ಜೇಸನ್ 12 ರನ್ ಬಾರಿಸಿದ್ದಾರೆ. ಟೀಂ ಇಂಡಿಯಾ ಅವೇಶ್ ಖಾನ್ 4, ಯಜುವೇಂದ್ರ ಚಹಾಲ್ 2, ಹರ್ಷಲ್ ಪಟೇಲ್ ಮತ್ತು ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದಿದ್ದಾರೆ.
ಆರಂಭಿಕರಾಗಿ ಕಣಕ್ಕಿಳಿದ ರಿತುರಾಜ್ ಗಾಯಕ್ವಾಡ್ 5 ರನ್ ಗಳಿಸಿ ಔಟಾದರೆ, ಇಶಾನ್ ಕಿಶನ್ 27 ರನ್ ಗಳಿಸಿದ್ದಾರೆ. ಇನ್ನು ಯುವ ಆಟಗಾರ ಶ್ರೇಯಸ್ ಅಯ್ಯರ್ 4 ವಿಕೆಟ್ ಗಳಿಗೆ ಔಟಾಗಿ ಪೆವಿಲಿಯನ್ ಸೇರಿದರು. ರಿಷಬ್ ಪಂತ್ 17, ಹಾರ್ದಿಕ್ ಪಾಂಡ್ಯ 46, ದಿನೇಶ್ ಕಾರ್ತಿಕ್ 55 ರನ್ ಬಾರಿಸಿದ್ದಾರೆ.
ದಕ್ಷಿಣ ಆಫ್ರಿಕಾ ಪರ ಜಸೇನ್, ಎನ್ಗಡಿ ಮತ್ತು ಅನ್ರಿಚ್ ನಾರ್ಟ್ಜೆ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


