ಐಪಿಎಸ್ ಅಧಿಕಾರಿ ವಿರುದ್ಧ ನ್ಯಾಯಾಲಯ ನಿಂದನೆ ಪ್ರಕರಣ ದಾಖಲಿಸಿದ ಎಂ.ಎಸ್.ಧೋನಿ
ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ವಿರುದ್ಧ ಮದ್ರಾಸ್ ಹೈಕೋರ್ಟ್‍ನಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಕ್ರಿಮಿನಲ್ ನ್ಯಾಯಾಲಯ ನಿಂದನೆ ಪ್ರಕರಣ ದಾಖಲಿಸಿದ್ದಾರೆ.

ಚೆನ್ನೈ: ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ವಿರುದ್ಧ ಮದ್ರಾಸ್ ಹೈಕೋರ್ಟ್‍ನಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಕ್ರಿಮಿನಲ್ ನ್ಯಾಯಾಲಯ ನಿಂದನೆ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹಾಗೂ ಮದ್ರಾಸ್ ಹೈಕೋರ್ಟ್ ವಿರುದ್ಧ ಐಪಿಎಸ್ ಅಧಿಕಾರಿ ವ್ಯಕ್ತಪಡಿಸಿದ್ದಾರೆ ಎನ್ನಲಾದ ಅಭಿಪ್ರಾಯವನ್ನು ವಿರೋಧಿಸಿ ಧೋನಿಯವರು ಈ ಪ್ರಕರಣ ದಾಖಲಿಸಿದ್ದಾರೆಂದು ತಿಳಿದುಬಂದಿದೆ.
ಧೋನಿ ವಿರುದ್ಧ ಮ್ಯಾಚ್‍ಫಿಕ್ಸಿಂಗ್ ಆರೋಪ ಮಾಡಿದ್ದಕ್ಕಾಗಿ ಐಪಿಎಸ್ ಅಧಿಕಾರಿ ಸಂಪತ್ ಕುಮಾರ್ ಮತ್ತು ಝೀ ಮೀಡಿಯಾ ಕಾರ್ಪೊರೇಷನ್ ವಿರುದ್ಧ 100 ಕೋಟಿ ರೂ. ಪರಿಹಾರ ನೀಡುವಂತೆ ಕೋರಲಾಗಿದೆ.
ತಮಿಳುನಾಡಿನ ಅಡ್ವೊಕೇಟ್ ಜನರಲ್ ಆರ್.ಷಣ್ಮುಗ ಸುಂದರಂ ಅವರು ಅಪರಾಧ ನ್ಯಾಯಾಲಯ ನಿಂದನೆ ಪ್ರಕರಣ ಮುಂದುವರಿಸಲು ಅನುಮತಿ ನೀಡಿದ ಹಿನ್ನೆಲೆಯಲ್ಲಿ, ನ್ಯಾಯಮೂರ್ತಿ ಪಿ.ಎನ್.ಪ್ರಕಾಶ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ಪ್ರಕರಣವನ್ನು ಶುಕ್ರವಾರ ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆದರೆ ಶುಕ್ರವಾರ ಪ್ರಕರಣದ ವಿಚಾರಣೆ ನಡೆದಿಲ್ಲ. ಮುಂದಿನ ಮಂಗಳವಾರಕ್ಕೆ ವಿಚಾರಣೆ ಆರಂಭವಾಗುವ ಸಾಧ್ಯತೆ ಇದೆ.
ಸಂಪತ್ ಕುಮಾರ್ 2021ರ ಡಿಸೆಂಬರ್ 17ರಂದು ಸಲ್ಲಿಸಿದ ಹೆಚ್ಚುವರಿ ಲಿಖಿತ ಹೇಳಿಕೆಯಲ್ಲಿ ದೇಶದ ಅತ್ಯುನ್ನತ ಕೋರ್ಟ್ ಹಾಗೂ ಹೈಕೋರ್ಟ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನುವುದು ಧೋನಿಯವರ ಆರೋಪವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


