ಸಿಡ್ನಿ: ಅತ್ಯಾಚಾರ ಆರೋಪ, ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಬಂಧನ- ವರದಿ
ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಅತ್ಯಾಚಾರ ಆರೋಪದಲ್ಲಿ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ಅವರಿಲ್ಲದೆ ಶ್ರೀಲಂಕಾ ತಂಡ ಟಿ-20 ವಿಶ್ವಕಪ್ ನಿಂದ ಹೊರಬಿದ್ದಿದೆ ಎಂದು ತಂಡದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಸಿಡ್ನಿ: ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್‌ಮನ್ ದನುಷ್ಕಾ ಗುಣತಿಲಕ ಅತ್ಯಾಚಾರ ಆರೋಪದಲ್ಲಿ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ಅವರಿಲ್ಲದೆ ಶ್ರೀಲಂಕಾ ತಂಡ ಟಿ-20 ವಿಶ್ವಕಪ್ ನಿಂದ ಹೊರಬಿದ್ದಿದೆ ಎಂದು ತಂಡದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕಳೆದ ವಾರ ಸಿಡ್ನಿಯಲ್ಲಿ ಮಹಿಳೆಯೊಬ್ಬರ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಭಾನುವಾರ ಸುಮಾರು 1 ಗಂಟೆ ಸುಮಾರಿನಲ್ಲಿ ದನುಷ್ಕಾ ಗುಣತಿಲಕ ತಂಗಿದ್ದ ಹೋಟೆಲ್ ನಿಂದ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
ರೋಸ್ ಬೇಯಲ್ಲಿರುವ ಮನೆಯಲ್ಲಿ 29 ವರ್ಷದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯಕ್ಕೊಳಗಾದ ವರದಿಗಳ ನಂತರ ರಾಜ್ಯ ಅಪರಾಧ ಕಮಾಂಡ್‌ನ ಲೈಂಗಿಕ ಅಪರಾಧಗಳ ಸ್ಕ್ವಾಡ್ ಮತ್ತು ಪೂರ್ವ ಉಪನಗರ ಪೊಲೀಸ್ ಏರಿಯಾ ಕಮಾಂಡ್‌ನ ಡಿಟೆಕ್ಟಿವ್‌ಗಳು ಜಂಟಿ ತನಿಖೆಯನ್ನು ಪ್ರಾರಂಭಿಸಿದರು.
ಮಹಿಳೆಯು ಆನ್‌ಲೈನ್ ಡೇಟಿಂಗ್ ಅಪ್ಲಿಕೇಶನ್ ಮೂಲಕ ಗುಣತಿಲಕ ಅವರೊಂದಿಗೆ ಹಲವಾರು ದಿನಗಳವರೆಗೆ ಮೇಸೆಜ್ ವಿನಿಮಯ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಆರೋಪಿಸಿದ್ದಾರೆ.
ಇವರಿಬ್ಬರೂ ಬುಧವಾರ ಭೇಟಿಯಾಗಿದ್ದು, ದನುಷ್ಕಾ ಗುಣತಿಲಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.
ಶನಿವಾರ ಅಪರಾಧ ನಡೆದ ಸ್ಥಳ ಪರಿಶೀಲಿಸಲಾಗಿದ್ದು, ಗುಣತಿಲಕ ಅವರನ್ನು ಸಿಡ್ನಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು ಮತ್ತು ಒಪ್ಪಿಗೆಯಿಲ್ಲದೆ ನಾಲ್ಕು ಬಾರಿ ಲೈಂಗಿಕ ಸಂಭೋಗ ನಡೆಸಿರುವ ಆರೋಪ ಕೇಳಿಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


