ಕ್ರಿಕೆಟ್

ಟಿ20 ವಿಶ್ವಕಪ್ ಸೆಮಿಫೈನಲ್ ಗೂ ಮೊದಲೇ ಟೀಂ ಇಂಡಿಯಾಗೆ ಡಬಲ್ ಶಾಕ್: ನೆಟ್ಸ್ ನಲ್ಲಿ ಕೊಹ್ಲಿ, ರೋಹಿತ್ ಶರ್ಮಾಗೆ ಗಾಯ!

ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಟೀಂ ಇಂಡಿಯಾಗೆ ಡಬಲ್ ಆಘಾತ ಎದುರಾಗಿದ್ದು, ನೆಟ್ ಪ್ರಾಕ್ಚಿಸ್ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಗಾಯಕ್ಕೆ ತುತ್ತಾಗಿದ್ದಾರೆ.

ಟಿ20 ವಿಶ್ವಕಪ್ ಸೆಮಿಫೈನಲ್ ಗೂ ಮೊದಲೇ ಟೀಂ ಇಂಡಿಯಾಗೆ ಡಬಲ್ ಶಾಕ್: ನೆಟ್ಸ್ ನಲ್ಲಿ ಕೊಹ್ಲಿ, ರೋಹಿತ್ ಶರ್ಮಾಗೆ ಗಾಯ!
ನೆಟ್ಸ್ ನಲ್ಲಿ ಕೊಹ್ಲಿ, ರೋಹಿತ್ ಶರ್ಮಾಗೆ ಗಾಯ
Published On :

ಸಿಡ್ನಿ: ಟಿ20 ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಟೀಂ ಇಂಡಿಯಾಗೆ ಡಬಲ್ ಆಘಾತ ಎದುರಾಗಿದ್ದು, ನೆಟ್ ಪ್ರಾಕ್ಚಿಸ್ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಗಾಯಕ್ಕೆ ತುತ್ತಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟಿ 20 ವಿಶ್ವಕಪ್ ಸೆಮಿಫೈನಲ್‌ಗೆ ಮುನ್ನ, ನೆಟ್ಸ್‌ನಲ್ಲಿ ತರಬೇತಿ ಪಡೆಯುವಾಗ ಭಾರತೀಯ ಸ್ಟಾರ್ ಬ್ಯಾಟರ್‌ಗಳಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಗಾಯಕ್ಕೆ ತುತ್ತಾಗಿದ್ದಾರೆ. ಮಂಗಳವಾರವಷ್ಟೇ ರೋಹಿತ್ ಶರ್ಮಾ ಗಾಯಗೊಂಡಿದ್ದರು. ಇವರ ಬೆನ್ನಲ್ಲೇ ಇದೀಗ ವಿರಾಟ್ ಕೊಹ್ಲಿ ಕೂಡ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

ಬುಧವಾರ, ವಿರಾಟ್ ಕೊಹ್ಲಿ ತಮ್ಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಹ ಆಟಗಾರ ಹರ್ಷಲ್ ಪಟೇಲ್ ಅವರೊಂದಿಗೆ ನೆಟ್ ಪ್ರಾಕ್ಟಿಸ್ ವೇಳೆ ಅವರು ಎಸೆದ ಎಸೆತ ಕೊಹ್ಲಿ ಅವರ ತೊಡೆಸಂದಿಗೆ ಬಿದ್ದು, ನೋವಿಗೆ ತುತ್ತಾಗಿದ್ದರು. ನಂತರ ಅವರನ್ನು ತಂಡದ ಫಿಸಿಯೋ ಚಿಕಿತ್ಸೆಗೊಳಪಡಿಸಿದರಾದರೂ ಕೊಹ್ಲಿ ನೆಟ್‌ ಅಭ್ಯಾಸ ತೊರೆದು ಹೊರ ನಡೆದರು. ಇದು ತಂಡದಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಆದರೆ ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿದ ತಂಡದ ಆಡಳಿತ ಮಂಡಳಿ ಕೊಹ್ಲಿ ಪೆಟ್ಟು ಗಂಭೀರವಾಗಿಲ್ಲ, ಆತಂಕಪಡುವಂಥದ್ದೇನೂ ಇಲ್ಲ.. ಅಡಿಲೇಡ್ ಓವಲ್‌ನಲ್ಲಿ ನಾಳೆ ಅಂದರೆ ಗುರುವಾರ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.