ಕ್ರಿಕೆಟ್

ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್: ಕೊಹ್ಲಿ, ಪಾಂಡ್ಯ ಅದ್ಭುತ ಬ್ಯಾಟಿಂಗ್; ಇಂಗ್ಲೆಂಡ್'ಗೆ 169 ರನ್ ಗುರಿ!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 168 ರನ್ ಪೇರಿಸಿದೆ.

ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್: ಕೊಹ್ಲಿ, ಪಾಂಡ್ಯ ಅದ್ಭುತ ಬ್ಯಾಟಿಂಗ್; ಇಂಗ್ಲೆಂಡ್'ಗೆ 169 ರನ್ ಗುರಿ!
ಕೊಹ್ಲಿ-ಹಾರ್ದಿಕ್ ಪಾಂಡ್ಯ
Published On :

ಅಡಿಲೇಡ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 168 ರನ್ ಪೇರಿಸಿದೆ.

ಅಡಿಲೇಡ್ ನಲ್ಲಿ ನಡೆಯುತ್ತಿರುವ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಆರಂಭಿಕ ಆಘಾತ ಎದುರಿಸಿದರು. ಮಾಜಿ ನಾಯಕ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 50 ರನ್ ಬಾರಿಸಿದ್ದಾರೆ.

ಇನ್ನು ಕೊಹ್ಲಿಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಸಹ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 63 ರನ್ ಕಲೆಹಾಕಿದ್ದಾರೆ. ಭಾರತ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಬಾರಿಸಿದ್ದು ಇಂಗ್ಲೆಂಡ್ ಗೆ ಗೆಲ್ಲಲು 169 ರನ್ ಗಳ ಗುರಿ ನೀಡಿದೆ. 

ಇಂಗ್ಲೆಂಡ್ ಪರ ಕ್ರಿಸ್ ಜೋರ್ಡನ್ 3, ಕ್ರಿಸ್ ವೋಕ್ಸ್ ಮತ್ತು ಅದಿಲ್ ರಶೀದ್ ತಲಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.