ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಕೊಹ್ಲಿ ನಿರಾಶೆ, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಕೆ
ಆಸ್ಟ್ರೇಲಿಯಾದ ಆಡಿಲೇಡ್ ನಲ್ಲಿ ನಿನ್ನೆ ನಡೆದ ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಟೀ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ನಿರಾಶೆ ವ್ಯಕ್ತಪಡಿಸಿದ್ದಾರೆ. ಆದರೆ, ಅಲ್ಲಿನ ನೆನಪುಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

ನವದೆಹಲಿ: ಆಸ್ಟ್ರೇಲಿಯಾದ ಆಡಿಲೇಡ್ ನಲ್ಲಿ ನಿನ್ನೆ ನಡೆದ ಟಿ-20 ವಿಶ್ವಕಪ್ ಸೆಮಿಫೈನಲ್ ಸೋಲಿಗೆ ಟೀ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ನಿರಾಶೆ ವ್ಯಕ್ತಪಡಿಸಿದ್ದಾರೆ. ಆದರೆ, ಅಲ್ಲಿನ ನೆನಪುಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಟ್ವೀಟ್ ಮೂಲಕ ಅಭಿಮಾನಿಗಳೊಂದಿಗೆ ತನ್ನ ಭಾವನೆ ಹಂಚಿಕೊಂಡಿರುವ ವಿರಾಟ್ ಕೊಹ್ಲಿ, 'ನಮ್ಮ ಕನಸು ನನಸು ಮಾಡಿಕೊಳ್ಳದ ಕೊರತೆ ಹಾಗೂ ಹೃದಯದಲ್ಲಿ ನಿರಾಶೆಯೊಂದಿಗೆ ಆಸ್ಟ್ರೇಲಿಯಾ ತೊರೆಯುತ್ತೇವೆ. ಆದರೆ, ತಂಡವಾಗಿ ಸ್ಮರಣೀಯ ಕ್ಷಣಗಳನ್ನು ಕಳೆದಿದ್ದೇವೆ ಮತ್ತು ಇಲ್ಲಿಂದ ಉತ್ತಮ ಗುರಿಯನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.
ಕ್ರೀಡಾಂಗಣಗಳಲ್ಲಿ ನಮ್ಮನ್ನು ಬೆಂಬಲಿಸಲು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ನಮ್ಮ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದಗಳು. ಈ ಜರ್ಸಿಯನ್ನು ಧರಿಸಲು ಮತ್ತು ನಮ್ಮ ದೇಶವನ್ನು ಪ್ರತಿನಿಧಿಸಲು ಯಾವಾಗಲೂ ಹೆಮ್ಮೆಪಡುತ್ತೇನೆ ಎಂದು ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಿನ್ನೆ ನಡೆದ ಟಿ-20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್ ಲ್ಲಿ 4,000 ರನ್ ದಾಟಿದ ಮೊದಲ ಆಟಗಾರ ಎಂಬ ಖ್ಯಾತಿಯನ್ನು ಮುಡಿಗೇರಿಸಿಕೊಂಡರು. ಅಲ್ಲದೇ, ಟೂರ್ನಿಯಲ್ಲಿ ಗರಿಷ್ಠ ರನ್ ಕಲೆಹಾಕಿದ ಆಟಗಾರನಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


