ಇಂಗ್ಲೆಂಡ್ ಮುಂದೆ ಮುಗ್ಗರಿಸಿದ ಪಾಕ್: ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿದ ಜೋಸ್ ಬಟ್ಲರ್ ಪಡೆ!
ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಭರ್ಜರಿ ಗೆಲುವಿನ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಇಂಗ್ಲೆಂಡ್ ಎರಡನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಆಗಿದೆ.

ಮೆಲ್ಬೋರ್ನ್: ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಭರ್ಜರಿ ಗೆಲುವಿನ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇನ್ನು ಇಂಗ್ಲೆಂಡ್ ಎರಡನೇ ಬಾರಿಗೆ ಟಿ20 ವಿಶ್ವಕಪ್ ಚಾಂಪಿಯನ್ ಆಗಿದೆ.
ಮೆಲ್ಬರ್ನ್ ನ ಎಂಸಿಜಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 5 ವಿಕೆಟ್ ಗಳಿಂದ ಭರ್ಜರಿ ಜಯ ಸಾಧಿಸಿದೆ. ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಜಾಸ್ ಬಟ್ಲರ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನಕ್ಕೆ ಆಂಗ್ಲ ಬೌಲರ್ ಗಳ ಕಾಡಿದರು.
ಪಾಕ್ ಪರ ಆರಂಭಿಕರಾಗಿ ಕಣಕ್ಕಿಳಿದ ಮೊಹಮ್ಮದ್ ರಿಜ್ವಾನ್ 15 ಹಾಗೂ ಬಾಬರ್ ಅಜಾಂ 32 ರನ್ ಪೇರಿಸಿದರು. ಮೊಹಮ್ಮದ್ ಹ್ಯಾರಿಸ್ 8, ಶಾನ್ ಮಸೂದ್ 38, ಶದಾಬ್ ಖಾನ್ 20 ರನ್ ಪೇರಿಸಿದ್ದು ಆ ಮೂಲಕ ಪಾಕಿಸ್ತಾನ 8 ವಿಕೆಟ್ ನಷ್ಟಕ್ಕೆ 137 ರನ್ ಪೇರಿಸಿದ್ದು ಇಂಗ್ಲೆಂಡ್ ತಂಡಕ್ಕೆ 138 ರನ್ ಗಳ ಗುರಿ ನೀಡಿತ್ತು.
ಇನ್ನು ಪಾಕ್ ನೀಡಿದ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ ಪರ ಬೆನ್ ಸ್ಟೋಕ್ಸ್ 52 ರನ್ ಗಳ ಸ್ಫೋಟಕ ಬ್ಯಾಟಿಂಗ್ ಮಾಡಿ ತಂಡಕ್ಕೆ ಗೆಲುವು ತಂದುಕೊಟ್ಟರು. ಇನ್ನುಳಿದಂತೆ ಇಂಗ್ಲೆಂಡ್ ಪರ ಜೋಸ್ ಬಟ್ಲರ್ 26, ಸಾಲ್ಟ್ 10, ಹ್ಯಾರಿ ಬ್ರೋಕ್ 20, ಮೋಯಿನ್ ಅಲಿ 19 ಹಾಗೂ ಲಿವಿಂಗ್ಸ್ಟೋನ್ ಅಜೇಯ 1 ರನ್ ಗಳಿಸಿದ್ದಾರೆ.
ಪಾಕ್ ಪರ ಬೌಲಿಂಗ್ ನಲ್ಲಿ ಹಾರಿಸ್ ರೌಫ್ ಮೊಹಮ್ಮದ್ ವಾಸೀಂ ತಲಾ 2 ವಿಕೆಟ್, ಶಾಹೀನ್ ಶಾ ಆಫ್ರಿದಿ, ಶಬಾದ್ ಖಾನ್ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


