ಕ್ರಿಕೆಟ್

IND vs NZ: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ

ಭಾನುವಾರ ಇಲ್ಲಿನ ಬೇ ಓವಲ್‌ನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

IND vs NZ: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ
ಟಾಸ್ ಗೆದ್ದ ನ್ಯೂಜಿಲೆಂಡ್
Published On :

ಮೌಂಟ್ ಮೌಂಗನುಯಿ: ಭಾನುವಾರ ಇಲ್ಲಿನ ಬೇ ಓವಲ್‌ನಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಶುಕ್ರವಾರದಂದು (ನ.18) ವೆಲ್ಲಿಂಗ್ಟನ್‌ನಲ್ಲಿ ನಡೆಯಬೇಕಿದ್ದ ಸರಣಿಯ ಮೊದಲನೇ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.

ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಟೀಂ ಇಂಡಿಯಾ ಬಲಿಷ್ಠ ಕಿವೀಸ್ ವಿರುದ್ಧ ಗೆಲುವು ಸಾಧಿಸುವ ವಿಶ್ವಾಸದಲ್ಲಿದ್ದು, ಭಾರತದ ಪರವಾಗಿ ಇಶಾನ್ ಕಿಶನ್ ಜೊತೆ ರಿಷಬ್ ಪಂತ್ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದೆ.

ಉಭಯ ತಂಡಗಳು

ಭಾರತ: ಹಾರ್ದಿಕ್ ಪಾಂಡ್ಯ(ನಾಯಕ), ಇಶಾನ್ ಕಿಶನ್, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ಮತ್ತು ಯಜುವೇಂದ್ರ ಚಾಹಲ್.

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್(ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಮಿಲ್ನೆ ಮತ್ತು ಲಾಕಿ ಫರ್ಗುಸನ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.