2ನೇ ಟಿ20 ಪಂದ್ಯ: ಸೂರ್ಯ ಕುಮಾರ್ ಸ್ಫೋಟಕ ಶತಕ, ನ್ಯೂಜಿಲ್ಯಾಂಡ್ ಗೆ 192 ರನ್ ಟಾರ್ಗೆಟ್!
ನ್ಯೂಜಿಲ್ಯಾಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ 191 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿದೆ.

ಮೌಂಟ್ ಮೌಂಗನುಯಿ: ನ್ಯೂಜಿಲ್ಯಾಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ 191 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿದೆ.
ಮೌಂಟ್ ಮೌಂಗನುಯಿಯಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಪರ ಇಶಾನ್ ಕಿಶನ್ 36 ರನ್ ಪೇರಿಸಿ ಉತ್ತಮ ಓಪನಿಂಗ್ ನೀಡಿದರು. ಆದರೆ ರಿಷಬ್ ಪಂತ್ 6 ರನ್ ಗಳಿಗೆ ಔಟ್ ಆಗಿ ನಿರಾಸೆ ಮೂಡಿಸಿದರು.
ನಂತರ ಬಂದ ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ತಂಡ ಬೃಹತ್ ಪೇರಿಸಲು ನೆರವಾದರು. ಸೂರ್ಯಕುಮಾರ್ 51 ಎಸೆತಗಳಲ್ಲಿ 111 ರನ್ ಪೇರಿಸಿ ಅಜೇಯರಾಗಿ ಉಳಿದರು. ಶ್ರೇಯಸ್ ಅಯ್ಯರ್ 13 ಹಾಗೂ ನಾಯಕ ಹಾರ್ದಿಕ್ ಪಾಂಡ್ಯಾ 13 ರನ್ ಪೇರಿಸಿ ಔಟಾದರು.
ನ್ಯೂಜಿಲ್ಯಾಂಡ್ ಪರ ಬೌಲಿಂಗ್ ನಲ್ಲಿ ಟೀಮ್ ಸೌಥಿ 3, ಫರ್ಗ್ಯೂಸನ್ 2 ಮತ್ತು ಸೋಧಿ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


