3ನೇ ಟಿ20: ವಿಶ್ವ ದಾಖಲೆ ನಿರ್ಮಿಸಿದ ಭಾರತದ ದಿನೇಶ್ ಕಾರ್ತಿಕ್
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಹರಿಣಗಳು ನೀಡಿದ್ದ 228ರನ್ ಗಳ ಬೃಹತ್ ಗುರಿಯನ್ನು ಬೆನ್ನ ಹತ್ತಿದ್ದ ಟೀಂ ಇಂಡಿಯಾಗೆ ತಮ್ಮ ಸ್ಪೋಟಕ ಆಟದ ಮೂಲಕ ನೆರವು ನೀಡಿದ್ದ ದಿನೇಶ್ ಕಾರ್ತಿಕ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇಂದೋರ್: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಹರಿಣಗಳು ನೀಡಿದ್ದ 228ರನ್ ಗಳ ಬೃಹತ್ ಗುರಿಯನ್ನು ಬೆನ್ನ ಹತ್ತಿದ್ದ ಟೀಂ ಇಂಡಿಯಾಗೆ ತಮ್ಮ ಸ್ಪೋಟಕ ಆಟದ ಮೂಲಕ ನೆರವು ನೀಡಿದ್ದ ದಿನೇಶ್ ಕಾರ್ತಿಕ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಹೌದು.. ಇಂದೋರ್ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ದಿನೇಶ್ ಕಾರ್ತಿಕ್ ಅಕ್ಷರಶಃ ಅಬ್ಬರಿಸಿ ಬೊಬ್ಬಿರಿದರು. ಸೌತ್ ಆಫ್ರಿಕಾ ನೀಡಿದ 228 ರನ್ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ರೋಹಿತ್ ಶರ್ಮಾ ಶೂನ್ಯಕ್ಕೆ ಔಟಾದರೆ, ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ (1) ಕೂಡ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ದಿನೇಶ್ ಕಾರ್ತಿಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.
ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ದಿನೇಶ್ ಕಾರ್ತಿಕ್ 4 ಸಿಕ್ಸರ್ ಹಾಗೂ 4 ಬೌಂಡರಿ ಸಿಡಿಸಿದರು. ಅಲ್ಲದೆ ಕೇವಲ 20 ಎಸೆತಗಳಲ್ಲಿ 219 ರ ಸ್ಟ್ರೈಕ್ ರೇಟ್ನಲ್ಲಿ 46 ರನ್ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದರು. ಆದರೆ ಈ ವೇಳೆ ಸ್ವಿಚ್ ಹಿಟ್ ಬಾರಿಸುವ ಯತ್ನದಲ್ಲಿ ಬೌಲ್ಡ್ ಆಗಿ ಹೊರನಡೆಯಬೇಕಾಯಿತು.
ಈ ಸ್ಪೋಟಕ ಇನಿಂಗ್ಸ್ ಮೂಲಕ ಟಿ20 ಕ್ರಿಕೆಟ್ನಲ್ಲಿ ದಿನೇಶ್ ಕಾರ್ತಿಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಬಾರಿ 200 ಕ್ಕೂ ಅಧಿಕ ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದ ಅತೀ ಹಿರಿಯ ಆಟಗಾರ ಎಂಬ ದಾಖಲೆಗೆ ದಿನೇಶ್ ಕಾರ್ತಿಕ್ ಭಾಜನರಾಗಿದ್ದಾರೆ. ಈ ಹಿಂದೆ ಈ ದಾಖಲೆ ಶ್ರೀಲಂಕಾದ ಸನತ್ ಜಯಸೂರ್ಯ ಹೆಸರಿನಲ್ಲಿತ್ತು. ಜಯಸೂರ್ಯ ತಮ್ಮ 37ನೇ ವಯಸ್ಸಿನಲ್ಲಿ 2 ಬಾರಿ 200ರ ಸ್ಟ್ರೈಕ್ ರೇಟ್ನಲ್ಲಿ 30ಕ್ಕೂ ಹೆಚ್ಚು ರನ್ ಬಾರಿಸಿದ್ದರು.
ಇದೀಗ ದಿನೇಶ್ ಕಾರ್ತಿಕ್ ತಮ್ಮ 37ನೇ ವಯಸ್ಸಿನಲ್ಲಿ 3 ಬಾರಿ 200 ಕ್ಕಿಂತಲೂ ಹೆಚ್ಚಿನ ಸ್ಟ್ರೈಕ್ ರೇಟ್ 30ಕ್ಕೂ ಹೆಚ್ಚು ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಭರ್ಜರಿ ಸ್ಟ್ರೈಕ್ ರೇಟ್ ಮೂಲಕ ಅಬ್ಬರಿಸಿದ ಅತ್ಯಂತ ಹಿರಿಯ ಆಟಗಾರ ಎಂಬ ವಿಶೇಷ ವಿಶ್ವ ದಾಖಲೆಯನ್ನು ದಿನೇಶ್ ಕಾರ್ತಿಕ್ ತಮ್ಮದಾಗಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


