2023ರ ಏಷ್ಯಾ ಕಪ್ಗಾಗಿ ಭಾರತ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ: ಜಯ್ ಶಾ ಸ್ಪಷ್ಟನೆ
2023ರ ಏಷ್ಯಾಕಪ್ಗಾಗಿ ಭಾರತ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಮುಂಬೈ: 2023ರ ಏಷ್ಯಾಕಪ್ಗಾಗಿ ಭಾರತ ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮುಖ್ಯಸ್ಥ ಜಯ್ ಶಾ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ಮುಂಬೈನಲ್ಲಿ ನಡೆದ 91ನೇ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯ ಬಳಿಕ ಮಾತನಾಡಿದ ಅವರು, ಮುಂದಿನ ಏಷ್ಯಾಕಪ್ಗಾಗಿ ಭಾರತ ತಂಡವು ಪಾಕಿಸ್ತಾನ ಪ್ರವಾಸ ಕೈಗೊಳ್ಳುವುದಿಲ್ಲ ಎಂದು ಹೇಳಿದರು.
2023ರ ಏಷ್ಯಾ ಕಪ್ ಟೂರ್ನಿಯನ್ನು ಪಾಕಿಸ್ತಾನವು ಆಯೋಜಿಸಲಿದೆ. ಏಷ್ಯಾಕಪ್ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸಿದರೆ ಭಾರತ ತಂಡವು ಟೂರ್ನಿಯಲ್ಲಿ ಪಾಲ್ಗೊಳ್ಳುವುದಿಲ್ಲ. ಬದಲಾಗಿ ಪಾಕ್ ಕ್ರಿಕೆಟ್ ಮಂಡಳಿ ಬೇರೆ ದೇಶದಲ್ಲಿ ಟೂರ್ನಿಯನ್ನು ಆಯೋಜಿಸಿದರೆ ಮಾತ್ರ ಟೀಂ ಇಂಡಿಯಾ ಭಾಗವಹಿಸಲಿದೆ ಎಂದು ತಿಳಿಸಿದರು.
ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಸಂಬಂಧ ಏಷ್ಯನ್ ಕ್ರಿಕೆಟ್ ಕೌನ್ಸಿಲ್ನಲ್ಲಿ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಭಾರತ ಕೊನೆಯದಾಗಿ 2005-06ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ದ್ವಿಪಕ್ಷೀಯ ಸರಣಿಗಾಗಿ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು. ಇನ್ನು ಪಾಕಿಸ್ತಾನ ತಂಡವು 2012-13ರಲ್ಲಿ ಕೊನೆಯ ಬಾರಿ ಭಾರತದಲ್ಲಿ ಸರಣಿ ಆಡಿತ್ತು. ಇದಾದ ಬಳಿಕ ಉಭಯ ದೇಶಗಳು ದ್ವಿಪಕ್ಷೀಯ ಕ್ರಿಕೆಟ್ ಸರಣಿಯನ್ನು ಆಡಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


