ಟಿ20 ವಿಶ್ವಕಪ್ 2022: ಆಫ್ಘಾನ್ ವಿರುದ್ಧ ಇಂಗ್ಲೆಂಡ್ ಗೆ 5 ವಿಕೆಟ್ ಗಳ ಜಯ
ಟಿ20 ವಿಶ್ವಕಪ್ 2022 ಟೂರ್ನಿಯಲ್ಲಿ ಆಫ್ಘಾನ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

ಪರ್ತ್: ಟಿ20 ವಿಶ್ವಕಪ್ 2022 ಟೂರ್ನಿಯಲ್ಲಿ ಆಫ್ಘಾನ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.
ಪರ್ತ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಅಫ್ಘಾನಿಸ್ತಾನ 112 ರನ್ ಗಳಿಗೆ ಆಲೌಟ್ ಆಯಿತು. ಆಫ್ಗಾನ್ ಕೊಟ್ಟ 113 ರನ್ ಗಳ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್ 5 ವಿಕೆಟ್ ನಷ್ಟಕ್ಕೆ 113 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಆಫ್ಘಾನ್ ಪರ ರಹಮಾನುಲ್ಲಾ ಗುರ್ಬಾಜ್ 10, ಇಬ್ರಾಹಿಂ ಜದ್ರಾನ್ 32, ಉಸ್ಮಾನ್ ಘನಿ 30 ಹಾಗೂ ನಜೀಬುಲ್ಲಾ ಜದ್ರಾನ್ 13 ರನ್ ಬಾರಿಸಿದ್ದಾರೆ.
ಇಂಗ್ಲೆಂಡ್ ಪರ ಬೌಲಿಂಗ್ ನಲ್ಲಿ ಸ್ಯಾಮ್ ಕುರ್ರಾನ್ 5, ಬೆನ್ ಸ್ಟೋಕ್ಸ್ ಮತ್ತು ಮಾರ್ಕ್ ವುಡ್ ತಲಾ 2 ವಿಕೆಟ್ ಪಡೆದಿದ್ದಾರೆ.
ಇಂಗ್ಲೆಂಡ್ ಪರ ಜೋಸ್ ಬಟ್ಲರ್ 18 ರನ್, ಅಲೆಕ್ಸ್ ಹಾಲೆಸ್ 19, ಡೇವಿಡ್ ಮಲಾನ್ 18, ಲಿವಿಂಗ್ ಸ್ಟೋನ್ ಅಜೇಯ 29 ರನ್ ಗಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


