ಟಿ-20 ವಿಶ್ವಕಪ್: ವಿರಾಟ್ ಕೊಹ್ಲಿಯಿಂದ ಹೊಸ ದಾಖಲೆ, ಈ ಸಾಧನೆ ಮಾಡಿದ ದೇಶದ ಮೊದಲ ಆಟಗಾರ!
ಟಿ-20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಆಟಗಾರ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಅತಿ ವೇಗವಾಗಿ 1,000 ರನ್ ಗಳಿಸಿದ ವಿಶ್ವದ ಎರಡನೇ ಹಾಗೂ ದೇಶದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಪರ್ತ್: ಟಿ-20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಆಟಗಾರ ಮತ್ತೊಂದು ಹೊಸ ದಾಖಲೆ ಬರೆದಿದ್ದಾರೆ. ಅತಿ ವೇಗವಾಗಿ 1,000 ರನ್ ಗಳಿಸಿದ ವಿಶ್ವದ ಎರಡನೇ ಹಾಗೂ ದೇಶದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ಇಂದು ನಡೆದ ಟಿ-20 ವಿಶ್ವಕಪ್ ಟೂರ್ನಿಯ ಸೂಪರ್ -12 ಹಂತದ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಕೊಹ್ಲಿ ಈ ಹೊಸ ದಾಖಲೆ ಬರೆದರು. 22 ಪಂದ್ಯಗಳಲ್ಲಿ 22 ಇನ್ನಿಂಗ್ಸ್ ಗಳಲ್ಲಿ 83.41 ರ ಸರಾಸರಿಯಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.
ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮಹೇಲ ಜಯವರ್ಧನೆ ಮೊದಲ ಸ್ಥಾನದಲ್ಲಿದ್ದಾರೆ. ಅವರು 31 ಪಂದ್ಯಗಳಿಂದ 39.07 ಸರಾಸರಿಯಲ್ಲಿ 1,016 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಜಯವರ್ಧನೆ ನಂತರದ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು 36 ಪಂದ್ಯಗಳ 33 ಇನ್ನಿಂಗ್ಸ್ ಗಳಿಂದ 919 ರನ್ ಗಳಿಸಿದ್ದಾರೆ.
ಸದ್ಯ ಟಿ-20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ಅರ್ಧ ಶತಕ ಗಳಿಸಿದ ದಾಖಲೆಯೂ ವಿರಾಟ್ ಹೆಸರಿನಲ್ಲಿದೆ. ಅವರು 12 ಅರ್ಧಶತಕ ಗಳಿಸಿದ್ದಾರೆ. ನಂತರದ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ನ ಕ್ರೀಸ್ ಗೇಲ್ ಮತ್ತು ರೋಹಿತ್ ಶರ್ಮಾ ಇದ್ದಾರೆ. ಈ ಇಬ್ಬರೂ ತಲಾ 9 ಬಾರಿ 50ಕ್ಕಿಂತ ಹೆಚ್ಚು ರನ್ ಬಾರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


