ಕ್ರಿಕೆಟ್

ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಗೆ ಸೋಲು; ಪಾಕ್ ಕಣ್ಣಲ್ಲಿ ನೀರು!

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡಿತ್ತು. ಆದರೆ ಇಂದಿನ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿದ್ದು ಈ ಮೂಲಕ ಪಾಕಿಸ್ತಾನದ ಸೆಮಿಫೈನಲ್ ಕನಸು ಮತ್ತಷ್ಟು ಕಗ್ಗಂಟಾಗಿದೆ.

ಟಿ20 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾಗೆ ಸೋಲು; ಪಾಕ್ ಕಣ್ಣಲ್ಲಿ ನೀರು!
ಸಂಗ್ರಹ ಚಿತ್ರ
Published On :

ಪರ್ತ್: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸತತ ಸೋಲಿನಿಂದ ಕಂಗೆಟ್ಟಿರುವ ಪಾಕಿಸ್ತಾನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಪ್ರಾರ್ಥನೆ ಮಾಡಿತ್ತು. ಆದರೆ ಇಂದಿನ ಪಂದ್ಯದಲ್ಲಿ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿದ್ದು ಈ ಮೂಲಕ ಪಾಕಿಸ್ತಾನದ ಸೆಮಿಫೈನಲ್ ಕನಸು ಮತ್ತಷ್ಟು ಕಗ್ಗಂಟಾಗಿದೆ. 

ಪರ್ತ್ ನಲ್ಲಿ ನಡದೆ ಆಫ್ರಿಕಾ ಮತ್ತು ಭಾರತ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಹರಣಿಗಳ ಬೌಲಿಂಗ್ ದಾಳಿಗೆ ತತ್ತರಿಸಿದ್ದು, ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಪೇರಿಸಿತ್ತು. ಭಾರತ ನೀಡಿದ ಅಲ್ಪಮೊತ್ತ ಗುರಿಯನ್ನು ಬೆನ್ನಟ್ಟಿದ ಆಫ್ರಿಕಾ ತಂಡ ಆರಂಭಿಕ ಹಿನ್ನಡೆ ಅನುಭವಿಸಿದರೂ ಮಾರ್ಕ್ರಾಮ್ ಮತ್ತು ಡೇವಿಡ್ ಮಿಲ್ಲರ್ ಉತ್ತಮ ಜೊತೆಯಾಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. 

ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 9, ರೋಹಿತ್ ಶರ್ಮಾ 15, ವಿರಾಟ್ ಕೊಹ್ಲಿ 12 ಮತ್ತು ಸೂರ್ಯಕುಮಾರ್ ಯಾದವ್ 68 ರನ್ ಪೇರಿಸಿದ್ದಾರೆ. ದಕ್ಷಿಣ ಆಫ್ರಿಕಾ ಪರ ಡಿಕಾಕ್ 1, ಬವುಮಾ 10, ಮಾರ್ಕ್ರಾಮ್ 52, ಡೇವಿಡ್ ಮಿಲ್ಲರ್ ಅಜೇಯ 59 ರನ್ ಪೇರಿಸಿದ್ದಾರೆ. 

ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 2ರಲ್ಲಿ 5 ಅಂಕಗಳೊಂದಿಗೆ ದಕ್ಷಿಣ ಆಫ್ರಿಕಾ ಅಗ್ರಸ್ಥಾನದಲ್ಲಿದ್ದರೆ ಟೀಂ ಇಂಡಿಯಾ ನಾಲ್ಕು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇನ್ನು 2 ಅಂಕ ಗಳಿಸಿರುವ ಪಾಕಿಸ್ತಾನ ಐದನೇ ಸ್ಥಾನದಲ್ಲಿದೆ. 

ಸೆಮಿಫೈನಲ್ ಪ್ರವೇಶಿಸಲು ಭಾರತಕ್ಕೂ ಇನ್ನುಳಿದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ. ಬಾಂಗ್ಲಾದೇಶ ಮತ್ತು ಜಿಂಬಾಬ್ವೆ ನಡುವೆ ಕ್ರಮವಾಗಿ ನವೆಂಬರ್ 2 ಮತ್ತು ನವೆಂಬರ್ 6ರಂದು ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.