ಕ್ರಿಕೆಟ್

ಟಿ-20 ವಿಶ್ವಕಪ್: ಭಾರತವನ್ನು 133 ರನ್ ಗಳಿಗೆ ಕಟ್ಟಿಹಾಕಿದ ದಕ್ಷಿಣ ಆಫ್ರಿಕಾ

ಆಸ್ಟ್ರೇಲಿಯಾದ ಫರ್ತ್ ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಸೂಪರ್ ಲೀಗ್ ಹಂತದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ.

ಟಿ-20 ವಿಶ್ವಕಪ್: ಭಾರತವನ್ನು 133 ರನ್ ಗಳಿಗೆ ಕಟ್ಟಿಹಾಕಿದ ದಕ್ಷಿಣ ಆಫ್ರಿಕಾ
ಸೂರ್ಯ ಕುಮಾರ್
Published On :

ಪರ್ತ್: ಆಸ್ಟ್ರೇಲಿಯಾದ ಫರ್ತ್ ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್  ಸೂಪರ್ ಲೀಗ್ ಹಂತದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 9, ರೋಹಿತ್ ಶರ್ಮಾ 15, ವಿರಾಟ್ ಕೊಹ್ಲಿ 12 ರನ್ ಗಳಿಸಿ ಔಟಾಗುವುದರೊಂದಿಗೆ ಆರಂಭದಲ್ಲಿ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತ್ತು. ನಂತರ ಬಂದ ಸೂರ್ಯಕುಮಾರ್ ಯಾದವ್ 68 ರನ್ ಬಾರಿಸುವ ಮೂಲಕ ಟೀಂ ಇಂಡಿಯಾ 133 ರನ್ ಗಳಿಸಲು ನೆರವಾದರು. 

ಉಳಿದಂತೆ ದೀಪಕ್ ಹೂಡಾ ಶೂನ್ಯಕ್ಕೆ ಔಟಾದರೆ, ಹಾರ್ದಿಕ್ ಪಾಂಡ್ಯ 2, ದಿನೇಶ್ ಕಾರ್ತಿಕ್ 6, ಆರ್. ಅಶ್ವಿನ್ 7, ಭುವನೇಶ್ವರ್ ಕುಮಾರ್ 4 ರನ್ ಗಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.