ಕ್ರಿಕೆಟ್

ಮೊಹಮ್ಮದ್ ಶಮಿಗೆ ಕೋವಿಡ್; ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಉಮೇಶ್ ಯಾದವ್‌ಗೆ ಅವಕಾಶ: ವರದಿ

ಬಹುಕಾಲದ ಬಳಿಕ ಭಾರತದ ಟಿ20 ತಂಡಕ್ಕೆ ಆಯ್ಕೆಯಾಗಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಸೆಪ್ಟೆಂಬರ್ 20 ರಿಂದ ಮೊಹಾಲಿಯಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.

ಮೊಹಮ್ಮದ್ ಶಮಿಗೆ ಕೋವಿಡ್; ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಉಮೇಶ್ ಯಾದವ್‌ಗೆ ಅವಕಾಶ: ವರದಿ
ಶಮಿ (ಸಂಗ್ರಹ ಚಿತ್ರ)
Published On :

ಬಹುಕಾಲದ ಬಳಿಕ ಭಾರತದ ಟಿ20 ತಂಡಕ್ಕೆ ಆಯ್ಕೆಯಾಗಿದ್ದ ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಸೆಪ್ಟೆಂಬರ್ 20 ರಿಂದ ಮೊಹಾಲಿಯಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.

ಶಮಿ ಅವರಿಗೆ ಕೋವಿಡ್ ಪಾಸಿಟಿವ್ ಆಗಿರುವ ವಿಚಾರವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಖಚಿತಪಡಿಸಿದೆ. ಹೌದು, ಶಮಿಗೆ ಕೋವಿಡ್-19 ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ವಿಶ್ರಾಂತಿಯಲ್ಲಿದ್ದಾರೆ. ಹೀಗಾಗಿ ಚಿಂತಿಸುವ ಅಗತ್ಯವಿಲ್ಲ. ಅವರೀಗ ಪ್ರತ್ಯೇಕವಾಸದಲ್ಲಿದ್ದು, ಗುಣಮುಖರಾದ ನಂತರ ತಂಡ ಸೇರಿಕೊಳ್ಳಬಹುದು' ಎಂದಿದೆ.

ಇನ್ನು ಮೊಹಮ್ಮದ್ ಶಮಿ ಅವರ ಬದಲು ವೇಗಿ ಉಮೇಶ್‌ ಯಾದವ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದುವರೆಗೆ 7 ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಭಾರತ ಪರ ಆಡಿರುವ ಉಮೇಶ್, 2019ರಲ್ಲಿ ಆಸ್ಟ್ರೇಲಿಯಾ ವಿರುದ್ಧವೇ ಕೊನೆಯ ಸಲ ಟೀಮ್ ಇಂಡಿಯಾ ಪರ ಆಡಿದ್ದರು.

ಶಮಿ ಚೇತರಿಸಿಕೊಳ್ಳಲು ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ನೀವು ಭಾವಿಸುವಿರಿ ಎಂದು ಪ್ರಶ್ನಿಸಿದ್ದಕ್ಕೆ, ದಕ್ಷಿಣ ಆಫ್ರಿಕಾ ವಿರುದ್ಧದ ಮುಂದಿನ ಸರಣಿಯ ಹೊತ್ತಿಗೆ ಅವರು ಫಿಟ್ ಆಗುತ್ತಾರೆ ಎಂದು ಮೂಲವು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮುಂದಿನ ಸರಣಿಗೆ ಶಮಿ ಫಿಟ್ ಆಗುತ್ತಾರೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಆ ಸರಣಿ ಪ್ರಾರಂಭವಾಗಲು ಇನ್ನು 10 ದಿನಗಳ ಕಾಲಾವಕಾಶ ಇದೆ. ಹೀಗಾಗಿ ನೀವು ಭಾವಿಸುವುದಕ್ಕಿಂತ ಹೆಚ್ಚು ನಾವು ಭರವಸೆಯನ್ನು ಹೊಂದಿದ್ದೇವೆ ಎಂದು ಮೂಲಗಳು ತಿಳಿಸಿವೆ.

ಭಾರತ ತಂಡ ಮೊದಲಿಗೆ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡಲಿದ್ದು, ಇದಾದ ಬಳಿಕ ದಕ್ಷಿಣ ಆಫ್ರಿಕಾ ತಂಡದ ವಿರುದ್ಧವೂ ಟಿ20 ಮತ್ತು ಏಕದಿನ ಸರಣಿಯನ್ನು ಆಡಬೇಕಿದೆ. ಮುಂದಿನ ತಿಂಗಳು ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್​ಗೂ ಮುನ್ನ ಭಾರತಕ್ಕೆ ಈ ಎರಡು ಸರಣಿಗಳು ಉಳಿದಿವೆ. ಟೀಮ್ ಇಂಡಿಯಾ ಮೊದಲಿಗೆ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಮೊದಲ ಪಂದ್ಯ ಸೆಪ್ಟಂಬರ್ 20 ರಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್​ನಲ್ಲಿ ಆಯೋಜಿಸಲಾಗಿದೆ. ದ್ವಿತೀಯ ಟಿ20 ಸೆಪ್ಟೆಂಬರ್  23 ಹಾಗೂ ಅಂತಿಮ ಪಂದ್ಯ ಸೆಪ್ಟೆಂಬರ್ 25 ರಂದು ಕ್ರಮವಾಗಿ ನಾಗ್ಪುರ ಮತ್ತು ಹೈದರಾಬಾದ್​ನಲ್ಲಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.