ಆಸೀಸ್ ವಿರುದ್ಧದ ಮೂರನೇ ಟಿ-20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಟೀಂ ಇಂಡಿಯಾ
ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಇಂದು ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಹೈದರಾಬಾದ್: ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಇಂದು ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಇಂದಿನ ಪಂದ್ಯದಲ್ಲಿ ವೇಗಿ ಭುವನೇಶ್ವರ್ ಕುಮಾರ್ ಟೀಂ ಇಂಡಿಯಾಗೆ ಮರಳಿದ್ದಾರೆ. ಆದರೆ, ರಿಷಭ್ ಪಂತ್ ಪಂದ್ಯದಿಂದ ಹೊರಗೆ ಉಳಿದಿದ್ದಾರೆ.
ಆಸ್ಟ್ರೇಲಿಯಾ ತಂಡದಲ್ಲಿ ಸೀನ್ ಅಬಾಟ್ ಬದಲಿಗೆ ಜೋಶ್ ಇಂಗ್ಲಿಸ್ ಅವರನ್ನು ಕರೆ ತರಲಾಗಿದೆ. ಮೊಹಾಲಿಯಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಸೋತಿದ್ದ ಭಾರತ, ನಾಗಪುರದಲ್ಲಿ ಶುಕ್ರವಾರ ನಡೆದ ಎಂಟು ಓವರ್ ಗಳ ಪಂದ್ಯ ಗೆದ್ದು ಸರಣಿಯನ್ನು 1-1ರಲ್ಲಿ ಸಮಬಲ ಮಾಡಿಕೊಂಡಿತ್ತು. ಇಂದಿನ ಪಂದ್ಯ ಗೆದ್ದು ಸರಣಿ ಗೆಲ್ಲುವತ್ತ ಟೀಂ ಇಂಡಿಯಾ ಗಮನ ಹರಿಸಿದೆ.
ಟೀಂ ಇಂಡಿಯಾ ಇಂತಿದೆ: ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ) ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್
ಆಸ್ಟ್ರೇಲಿಯಾ ತಂಡ ಇಂತಿದೆ: ಆರನ್ ಫಿಂಚ್(ನಾಯಕ) ಕ್ಯಾಮೆರಾನ್ ಗ್ರೀನ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಡೇನಿಯಲ್ ಸ್ಯಾಮ್ಸ್, ಪ್ಯಾಟ್ ಕಮ್ಮಿನ್ಸ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


