ಮೊದಲ ಏಕದಿನ ಪಂದ್ಯ: ಟೀಂ ಇಂಡಿಯಾ ವಿರುದ್ಧ ಬಾಂಗ್ಲಾದೇಶಕ್ಕೆ 1 ವಿಕೆಟ್ ರೋಚಕ ಗೆಲುವು
ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ 1 ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ.

ಮೀರ್‌ಪುರ್: ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ 1 ವಿಕೆಟ್ ಗಳ ರೋಚಕ ಗೆಲುವು ಸಾಧಿಸಿದೆ.
ಮೀರ್‌ಪುರ್ ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 186 ರನ್ ಗಳ ಅಲ್ಪಮೊತ್ತಕ್ಕೆ ಆಲೌಟ್ ಆಯಿತು. ಭಾರತ ನೀಡಿದ 187 ರನ್ ಗಳ ಸಾಧಾರಣ ಮೊತ್ತ ಬೆನ್ನಟ್ಟಿದ ಬಾಂಗ್ಲಾದೇಶ 9 ವಿಕೆಟ್ ನಷ್ಟಕ್ಕೆ 187 ರನ್ ಬಾರಿಸಿ ಗೆಲುವಿನ ನಗೆ ಬೀರಿತು.
ಬಾಂಗ್ಲಾದೇಶ ಪರ ಲಿಟನ್ ದಾಸ್ 41, ಅನಾಮುಲ್ ಹಕ್ 14, ಶಕೀಬ್ ಅಲ್ ಹಸನ್ 29, ಮುಶ್ಫಿಕರ್ ರಹೀಮ್ 18, ಮೆಹಿದಿ ಹಸನ್ ಮಿರಾಜ್ ಅಜೇಯ 38 ರನ್ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಭಾರತದ ಪರ ಬೌಲಿಂಗ್ ನಲ್ಲಿ ಮೊಹಮ್ಮದ್ ಸಿರಾಜ್ 3, ಕುಲದೀಪ್ ಸೇನ್ ಮತ್ತು ವಾಷಿಂಗ್ಟನ್ ಸುಂದರ್ ತಲಾ 2 ವಿಕೆಟ್, ದೀಪಕ್ ಚಹಾರ್ ಮತ್ತು ಶಾರ್ದೂಲ್ ಠಾಕೂರ್ ತಲಾ 1 ವಿಕೆಟ್ ಪಡೆದಿದ್ದಾರೆ.
ಭಾರತದ ಪರ ಕೆಎಲ್ ರಾಹುಲ್ ಹೊರತುಪಡಿಸಿದರೆ ಉಳಿದ ಯಾವುದೇ ಆಟಗಾರರು ಹೆಚ್ಚು ಹೊತ್ತು ಕ್ರೀಸ್ ನಲ್ಲಿ ನಿಲ್ಲಲಿಲ್ಲ. ನಾಯಕ ರೋಹಿತ್ ಶರ್ಮಾ 27 ರನ್ ಗಳಿಸಿದರೆ, ಶಿಖರ್ ಧವನ್ 7, ವಿರಾಟ್ ಕೊಹ್ಲಿ 9, ಶ್ರೇಯಸ್ ಅಯ್ಯರ್ 24, ವಾಷಿಂಗ್ಟನ್ ಸುಂದರ್ 19, ಶಾರ್ದೂಲ್ ಠಾಕೂರ್ 2, ಮೊಹಮ್ಮದ್ ಸಿರಾಜು 9, ಕುಲದೀಪ್ ಸೇನ್ ಕೇವಲ 2 ರನ್ ಗಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


