ಅಂತಿಮ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ; ಬಾಂಗ್ಲಾಗೆ 2-1 ಸರಣಿ ಜಯ
ಮೂರನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಭಾರತ ತಂಡ 227 ರನ್ಗಳಿಂದ ಮಣಿಸಿದ್ದು,. 3 ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.

ಚಿತ್ತಗಾಂಗ್: ಮೂರನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಭಾರತ ತಂಡ 227 ರನ್ಗಳಿಂದ ಮಣಿಸಿದ್ದು,. 3 ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.
ಭಾರತ ನೀಡಿದ 410 ರನ್ ಗಳ ಬೃಹತ್ ಗುರಿ ಬೆನ್ನು ಹತ್ತಿದ ಬಾಂಗ್ಲಾದೇಶ ತಂಡ 34 ಓವರ್ ಗಳಲ್ಲಿ 182 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ 227ರನ್ ಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದ ಜಯದ ಹೊರತಾಗಿಯೂ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-1 ಅಂತರದಲ್ಲಿ ಸರಣಿ ಸೋಲು ಕಂಡಿದೆ.
ಇಂದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 409 ರನ್ ಗಳಿಸಿತ್ತು. ಇಶಾನ್ ಕಿಶನ್ ಅವರು ದ್ವಿಶತಕ (210) ಸಿಡಿಸಿದರೆ, ಕೊಹ್ಲಿ ಶತಕ (113) ಗಳಿಸಿದರು. ಬೃಹತ್ ಗುರಿ ಬೆನ್ನು ಹತ್ತಿದ ಬಾಂಗ್ಲಾ ಪಡೆ 34 ಓವರ್ಗಳಲ್ಲಿ 182ರನ್ಗಳಿಗೆ ಸರ್ವ ಪತನ ಕಂಡಿತು.
ಬಾಂಗ್ಲಾಪರ ಶಕೀಬ್ ಅಲ್ ಹಸನ್ 43 ರನ್ ಗಳಿಸಿದರೆ, ನಾಯಕ ಲಿಟನ್ ದಾಸ್ 29ರನ್, ಯಾಸಿರ್ ಅಲಿ 25 ಮತ್ತು ಮಹಮದುಲ್ಲಾ 20 ರನ್ ಗಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


