ಭಾರತ Vs ಬಾಂಗ್ಲಾ ಮೊದಲ ಟೆಸ್ಟ್: ಪೂಜಾರ, ಅಯ್ಯರ್ ಅರ್ಧ ಶತಕ; ಮೊದಲ ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 278/6
ಅತಿಥೇಯ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಭಾರತ 6 ವಿಕೆಟ್ ನಷ್ಟಕ್ಕೆ 278 ರನ್ ಪೇರಿಸಿದೆ.

ಚಿತ್ತಗಾಂಗ್(ಬಾಂಗ್ಲಾದೇಶ): ಅತಿಥೇಯ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಭಾರತ 6 ವಿಕೆಟ್ ನಷ್ಟಕ್ಕೆ 278 ರನ್ ಪೇರಿಸಿದೆ.
ಚಿತ್ತಗಾಂಗ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 90 ಓವರ್ ಗಳ ಮುಕ್ತಾಯಕ್ಕೆ 6 ವಿಕೆಟ್ ನಷ್ಟಕ್ಕೆ 278 ರನ್ ಪೇರಿಸಿದೆ. ಟೀಂ ಇಂಡಿಯಾ ಆರಂಭಿಕ ಆಘಾತ ಎದುರಾಗಿತ್ತು. 48 ರನ್ ಗಳಿಗೆ ಪ್ರಮುಖ ಮೂರು ವಿಕೆಟ್ ಗಳು ಪತನಗೊಂಡಿದ್ದವು. ಆರಂಭಿಕರಾದ ಕೆಎಲ್ ರಾಹುಲ್ 22, ಶುಭ್ಮನ್ ಗಿಲ್ 20 ಹಾಗೂ ವಿರಾಟ್ ಕೊಹ್ಲಿ ಕೇವಲ 1 ರನ್ ಗೆ ಔಟಾಗಿದ್ದರು.
ಈ ವೇಳೆ ಉತ್ತಮ ಜೊತೆಯಾಟ ನೀಡಿದ ಚೇತೇಶ್ವರ ಪೂಜಾರ ಹಾಗೂ ರಿಷಬ್ ಪಂತ್ 60 ರನ್ ಗಳ ಜೊತೆಯಾಟ ನೀಡಿದರು. ಇನ್ನು ಪಂತ್ 46 ರನ್ ಗಳಿಸಿದ್ದಾಗ ಮೆಹದಿ ಹಸನ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ಅರ್ಧ ಶತಕ ವಂಚಿತರಾದರು. ಇನ್ನು ಚೇತೇಶ್ವರ ಪೂಜಾರ 90 ರನ್ ಗಳಿಸಿದ್ದಾಗ ತೈಜುಲ್ ಇಸ್ಲಾಮ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು.
ಇನ್ನು ಶ್ರೇಯಸ್ ಅಯ್ಯರ್ ಅಜೇಯ 82 ರನ್ ಪೇರಿಸಿದ್ದು ಎರಡನೇ ದಿನದಾಟವನ್ನು ಪ್ರಾರಂಭಿಸಲಿದ್ದಾರೆ. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ 3, ಮೆಹದಿ ಹಸನ್ 2 ಮತ್ತು ಖಾಲೀದ್ ಅಹ್ಮದ್ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


