2ನೇ ಟೆಸ್ಟ್: ಬಾಂಗ್ಲಾ ಕೈಯಿಂದ ಗೆಲುವು ಕಸಿದ ಅಶ್ವಿನ್, ಅಯ್ಯರ್, ಟೆಸ್ಟ್ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ
ಢಾಕಾದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಅಂಚಿನಲ್ಲಿದ್ದ ಬಾಂಗ್ಲಾದೇಶದಿಂದ ಭಾರತ ಗೆಲುವು ಕಸಿಯುವ ಮೂಲಕ 2ನೇ ಟೆಸ್ಟ್ ಪಂದ್ಯವನ್ನು 3 ವಿಕೆಟ್ ಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ. ಆ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.

ಢಾಕಾ: ಢಾಕಾದಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಅಂಚಿನಲ್ಲಿದ್ದ ಬಾಂಗ್ಲಾದೇಶದಿಂದ ಭಾರತ ಗೆಲುವು ಕಸಿಯುವ ಮೂಲಕ 2ನೇ ಟೆಸ್ಟ್ ಪಂದ್ಯವನ್ನು 3 ವಿಕೆಟ್ ಗಳ ಅಂತರದಲ್ಲಿ ವಿರೋಚಿತ ಗೆಲುವು ಸಾಧಿಸಿದೆ. ಆ ಮೂಲಕ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ.
2ನೇ ಇನ್ನಿಂಗ್ಸ್ ನಲ್ಲಿ ಬಾಂಗ್ಲಾದೇಶ ನೀಡಿದ 145ರನ್ ಗಳ ಅಲ್ಪ ಗುರಿಯನ್ನು ಬೆನ್ನು ಹತ್ತಿದ ಟೀಂ ಇಂಡಿಯಾ ಕೇವಲ 74 ರನ್ ಗಳಿಗೆ 7 ವಿಕೆಟ್ ಕಳೆದುಕೊಂಡು ಸೋಲಿನ ಸಂಕಷ್ಟಕ್ಕೆ ಸಿಲುಕಿತ್ತು. ಬಾಂಗ್ಲಾಪರ ಮೆಹ್ದಿ ಹಸನ್ ಮಿರಾಜ್ 5 ವಿಕೆಟ್ ಪಡೆದು ಭಾರತಕ್ಕೆ ಮಾರಕವಾಗಿ ಪರಿಣಮಿಸಿದ್ದರು. ಇನ್ನೇನು ಬಾಂಗ್ಲಾದೇಶ ಗೆಲುವು ಸಾಧಿಸುತ್ತದೆ ಎನ್ನುವಾಗಲೇ 8ನೇ ವಿಕೆಟ್ ಗೆ ಜೊತೆಯಾದ ಆರ್ ಆಶ್ವಿನ್ ಮತ್ತು ಶ್ರೇಯಸ್ ಅಯ್ಯರ್ ಜೋಡಿ ಮುರಿಯದ 8ನೇ ವಿಕೆಟಿಗೆ 105 ಎಸೆತಗಳಲ್ಲಿ 71 ರನ್ ಜೊತೆಯಾಟವಾಡುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಅಂತಿಮವಾಗಿ ಇಬ್ಬರ ಉತ್ತಮ ಜೊತೆಯಾಟದಿಂದ ಭಾರತ 47 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 145 ರನ್ ಹೊಡೆಯಿತು.
ಅಶ್ವಿನ್(Ashwin) ಮತ್ತು ಶ್ರೇಯಸ್ ಅಯ್ಯರ್(Shreyas Iyer) ಸಾಹಸದಿಂದ ಬಾಂಗ್ಲಾದೇಶದ(Bangladesh) ವಿರುದ್ಧ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ(India) 3 ವಿಕೆಟ್‌ಗಳಿಂದ ಜಯಗಳಿಸಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ.
ಮೂರನೇ ದಿನದಾಟಕ್ಕೆ 4 ವಿಕೆಟ್ ಕಳೆದುಕೊಂಡು 45 ರನ್‌ಗಳಿಸಿದ್ದ ಭಾರತ 29 ರನ್ ಸೇರಿಸಿ ಮೂರು ವಿಕೆಟ್ ಕಳೆದುಕೊಂಡಿತು. ಈ ಸಮಯದಲ್ಲಿ ಶ್ರೇಯಸ್ ಅಯ್ಯರ್‌ಗೆ ಅಶ್ವಿನ್ ಜೊತೆಯಾದರು. ಶ್ರೇಯಸ್ ಅಯ್ಯರ್ 29 ರನ್(46 ಎಸೆತ, 4 ಬೌಂಡರಿ) ಹೊಡೆದರೆ ಅಶ್ವಿನ್ 42 ರನ್(62 ಎಸೆತ, 4 ಬೌಂಡರಿ, 1 ಸಿಕ್ಸರ್) ಬಾರಿಸಿದರು.
ಅಕ್ಷರ್ ಪಟೇಲ್ 34 ರನ್, ಜಯದೇವ್ ಉನಾದ್ಕತ್ 13, ರಿಷಭ್ ಪಂತ್ 9 ರನ್ ಗಳಿಸಿ ಔಟಾದರು. ಮೊದಲ ಟೆಸ್ಟ್ ಪಂದ್ಯವನ್ನು ಭಾರತ 188 ರನ್‌ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿತ್ತು. ಈ ಪಂದ್ಯದ ಗೆಲುವಿನ ಮೂಲಕ ಭಾರತ ತಂಡ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡಿದೆ.
ಸಂಕ್ಷಿಪ್ತ ಸ್ಕೋರ್
ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್ 227
ಭಾರತ ಮೊದಲ ಇನ್ನಿಂಗ್ಸ್ 314
ಬಾಂಗ್ಲಾದೇಶ ಎರಡನೇ ಇನ್ನಿಂಗ್ಸ್ 231
ಭಾರತ ಎರಡನೇ ಇನ್ನಿಂಗ್ಸ್ 145
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


