ಬಾಂಗ್ಲಾದೇಶದ ಮೆಹದಿ ಹಸನ್ ಮಿರಾಜ್ ಗೆ ಕೊಹ್ಲಿಯಿಂದ ಟೀಂ ಇಂಡಿಯಾ ಜೆರ್ಸಿ ಉಡುಗೊರೆ
ಬಾಂಗ್ಲಾದೇಶದ ಆಲ್ ರೌಂಡರ್ ಮೆಹದಿ ಹಸನ್ ಮಿರಾಜ್ ಅವರಿಗೆ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ವಿಶೇಷವಾದ ಉಡುಗೊರೆ ನೀಡಿದ್ದಾರೆ. ಭಾನುವಾರ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಗೆದ್ದ ನಂತರ ತಮ್ಮ ಹಸ್ತಾಕ್ಷರವಿರುವ ಟೀಂ ಇಂಡಿಯಾದ ಜೆರ್ಸಿಯನ್ನು ನೀಡಿದ್ದಾರೆ.

ಮಿರ್ ಪುರ: ಬಾಂಗ್ಲಾದೇಶದ ಆಲ್ ರೌಂಡರ್ ಮೆಹದಿ ಹಸನ್ ಮಿರಾಜ್ ಅವರಿಗೆ ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ವಿಶೇಷವಾದ ಉಡುಗೊರೆ ನೀಡಿದ್ದಾರೆ. ಭಾನುವಾರ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಗೆದ್ದ ನಂತರ ತಮ್ಮ ಹಸ್ತಾಕ್ಷರವಿರುವ ಟೀಂ ಇಂಡಿಯಾದ ಜೆರ್ಸಿಯನ್ನು ನೀಡಿದ್ದಾರೆ.
ವಿರಾಟ್ ಕೊಹ್ಲಿ ಅವರೊಂದಿಗೆ ಹೃದಯಸ್ಪರ್ಶಿ ಉಡುಗೊರೆ ಪಡೆಯುತ್ತಿರುವ ಫೋಟೋವನ್ನು ಮೆಹದಿ ಹಸನ್ ಮಿರಾಜ್ ಸಾಮಾಜಿಕ ಜಾಲತಾಣದಲ್ಲಿ ತನ್ನ ಅಭಿಮಾನಗಳೊಂದಿಗೆ ಹಂಚಿಕೊಂಡಿದ್ದಾರೆ. ಅತ್ಯುನ್ನತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರಿಂದ ವಿಶೇಷವಾದ ಸ್ಮರಣಿಕೆ ಪಡೆದಿರುವುದಾಗಿ ಮಿರಾಜ್ ಬರೆದುಕೊಂಡಿದ್ದಾರೆ.
ಬಾಂಗ್ಲಾದೇಶದಲ್ಲಿ ನಡೆದ ಭಾರತ ವಿರುದ್ಧದ ಸರಣಿಯಲ್ಲಿ ಮಿರಾಜ್ ಮಿಂಚಿದರು. ಏಕದಿನ ಸರಣಿಯಲ್ಲಿ ಬಾಂಗ್ಲಾ 2-1 ಅಂತರದಿಂದ ಗೆಲುವು ಸಾಧಿಸುವಲ್ಲಿ ಮಿರಾಜ್ ಪ್ರಮುಖ ಪಾತ್ರ ವಹಿಸಿದ್ದು, 141.00 ಸರಾಸರಿಯಲ್ಲಿ 141 ರನ್ ಗಳಿಸಿದರು. ಅಲ್ಲದೇ, ಸರಣಿಯಲ್ಲಿ ನಾಲ್ಕು ವಿಕೆಟ್ ಪಡೆಯುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಟೆಸ್ಟ್ ಸರಣಿಯಲ್ಲೂ ಉತ್ತಮ ಪ್ರದರ್ಶನ ತೋರಿದ ಮಿರಾಜ್, ಎರಡನೇ ಟೆಸ್ಟ್ ನಲ್ಲಿ ಐದು ವಿಕೆಟ್ ಸೇರಿದಂತೆ ಒಟ್ಟಾರೇ 11 ವಿಕೆಟ್ ಕಬಳಿಸಿದರು. ಅಲ್ಲದೇ ಬ್ಯಾಟಿಂಗ್ ನಲ್ಲಿಯೂ ಅತ್ಯುತ್ತಮ ಪ್ರದರ್ಶನ ತೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


