ರಿಷಬ್ ಪಂತ್ ಭರ್ಜರಿ ಶತಕ: ಇಂಗ್ಲೆಂಡ್ ನೆಲದಲ್ಲಿ ಏಕದಿನ ಸರಣಿ ಗೆದ್ದ ಟೀಂ ಇಂಡಿಯಾ!
ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.

ಮ್ಯಾಂಚೆಸ್ಟರ್: ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸುವ ಮೂಲಕ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿದೆ.
ಮ್ಯಾಂಚೆಸ್ಟರ್ ನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ 259 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ ಗೆಲ್ಲಲ್ಲು 260 ರನ್ ಗಳ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ರಿಷಬ್ ಪಂತ್ ಭರ್ಜರಿ ಶತಕ ಬಾರಿಸುವ ಮೂಲಕ ಗೆಲುವು ತಂದುಕೊಟ್ಟರು.
ಭಾರತ 42.1 ಓವರ್ ಮುಕ್ತಾಯಕ್ಕೆ 5 ವಿಕೆಟ್ ನಷ್ಟಕ್ಕೆ 261 ರನ್ ಬಾರಿಸಿ ಗೆಲುವಿನ ನಗೆ ಬೀರಿತು. ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 17, ವಿರಾಟ್ ಕೊಹ್ಲಿ 17 ರಿಷಬ್ ಪಂತ್ ಅಜೇಯ 125 ರನ್, ಹಾರ್ದಿಕ್ ಪಾಂಡ್ಯ 71 ರನ್ ಬಾರಿಸಿದ್ದಾರೆ.
ಇಂಗ್ಲೆಂಡ್ ಪರ ಜೇಸನ್ ರಾಯ್ 41 ರನ್ ಗಳಿಸಿ ಪಾಂಡ್ಯ ಬೌಲಿಂಗ್ ನಲ್ಲಿ ಔಟಾದರೆ, ಜೋಸ್ ಬಟ್ಲರ್ 60 ರನ್ ಗಳಿಗೆ ಔಟಾದರು. ಮೋಯಿನ್ ಅಲಿ 34, ಓವರ್ಟೋನ್ 32 ರನ್ ಗಳಿಗೆ ಔಟಾದರು.
ಟೀಂ ಇಂಡಿಯಾ ಪರ ಬೌಲಿಂಗ್ ನಲ್ಲಿ ಹಾರ್ದಿಕ್ ಪಾಂಡ್ಯ 4, ಯಜುವೇಂದ್ರ ಚಹಾಲ್ 3, ಮೊಹಮ್ಮದ್ ಶಮಿ 2 ಹಾಗೂ ರವೀಂದ್ರ ಜಡೇಜಾ 1 ವಿಕೆಟ್ ಪಡೆದಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


