ಟಿ20 ವಿಶ್ವಕಪ್: ಸೆಮಿಫೈನಲ್ ಸೋಲಿನ ಬೆನ್ನಲ್ಲೇ ಬಿಕ್ಕಿ ಬಿಕ್ಕಿ ಅತ್ತ ರೋಹಿತ್ ಶರ್ಮಾ, ವಿಡಿಯೋ!
ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ಇನ್ನು ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಂಡ ನಂತರ ಮೊದಲ ಐಸಿಸಿ ಟೂರ್ನಿಯ ಸೋಲು ಇದಾಗಿದ್ದು ರೋಹಿತ್ ಶರ್ಮಾ ಭಾವುಕರಾಗಿದ್ದಾರೆ.

ಬೆಂಗಳೂರು: ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ಇನ್ನು ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಂಡ ನಂತರ ಮೊದಲ ಐಸಿಸಿ ಟೂರ್ನಿಯ ಸೋಲು ಇದಾಗಿದ್ದು ರೋಹಿತ್ ಶರ್ಮಾ ಭಾವುಕರಾಗಿದ್ದಾರೆ.
ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರ ಫ್ಲಾಪ್ ಶೋ, ವಿರಾಟ್ ಕೊಹ್ಲಿ ಅವರ ನಿಧಾನಗತಿಯ ಬ್ಯಾಟಿಂಗ್, ಈ ತಪ್ಪುಗಳಿಂದಾಗಿ ಭಾರತ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಸೋತಿದೆ. ಇನ್ನು ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 10 ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿರುವುದು ಆಟಗಾರರ ಸಾಮರ್ಥ್ಯಕ್ಕೆ ಕಪ್ಪು ಚುಕ್ಕೆಯಂತಾಗಿದೆ.
ನಾಯಕ ರೋಹಿತ್ ಕಣ್ಣಿಂದ ಕಣ್ಣೀರು ಸುರಿಯಿತು
ಈ ಸೋಲಿನ ನಂತರ ಭಾರತೀಯ ಅಭಿಮಾನಿಗಳು ಹಾಗೂ ರೋಹಿತ್ ಶರ್ಮಾ ತಮ್ಮ ಕಣ್ಣೀರನ್ನು ಮರೆಮಾಡಲು ಸಾಧ್ಯವಾಗಲಿಲ್ಲ. ಈ ಸೋಲಿನ ನಂತರ ರೋಹಿತ್ ಅಳಲು ಪ್ರಾರಂಭಿಸಿದರು. ರೋಹಿತ್ ಅಭಿಮಾನಿಗಳು ಈ ಕಣ್ಣೀರನ್ನು ನೋಡಿ ಮತ್ತಷ್ಟು ಭಾವುಕರಾದರು. ಆದರೆ ಕೆಲವರು ರೋಹಿತ್ ಕಣ್ಣೀರು ಸುಳ್ಳು ಎಂದು ಕಮೆಂಟ್ ಮಾಡಿದ್ದಾರೆ.
ರೋಹಿತ್ ನಾಯಕತ್ವದ ಬಗ್ಗೆ ಪ್ರಶ್ನೆಗಳು ಎದ್ದಿವೆ
ಅದೇ ಸಮಯದಲ್ಲಿ ಈಗ ಈ ಟೂರ್ನಿಯಲ್ಲಿ ಭಾರತ ನಿರ್ಗಮಿಸಿದ ನಂತರ, ರೋಹಿತ್ ನಾಯಕತ್ವದ ಬಗ್ಗೆ ಪ್ರಶ್ನೆಗಳು ಏಳಲಾರಂಭಿಸಿವೆ. ಇದಕ್ಕೆ ಕಾರಣ ಕೆಲವು ತಪ್ಪು ನಿರ್ಧಾರಗಳು. ಇದರಲ್ಲಿ ದಿನೇಶ್ ಕಾರ್ತಿಕ್ ಬದಲಿಗೆ ರಿಷಬ್ ಪಂತ್ ಅವರನ್ನು ಆಯ್ಕೆ ಮಾಡಿದ್ದು ಅಲ್ಲದೆ ಅಕ್ಷರ್ ಪಟೇಲ್ ಅವರ ಕಳಪೆ ಪ್ರದರ್ಶನದ ಹೊರತಾಗಿಯೂ ಚಹಾಲ್ ರನ್ನು ತಂಡಕ್ಕೆ ಸೇರಿಸಿಕೊಳ್ಳದಿರುವುದು.
ಇಂಗ್ಲೆಂಡ್ ಗೆಲುವಿನ ನಂತರ ಇದೀಗ ನವೆಂಬರ್ 13ರಂದು ಮೆಲ್ಬೋರ್ನ್‌ನಲ್ಲಿ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


