ಕ್ರಿಕೆಟ್

ಐಸಿಸಿ ಟಿ20 ವಿಶ್ವಕಪ್: ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ, ಫೈನಲ್‌ನಲ್ಲಿ ಇಂಗ್ಲೆಂಡ್-ಪಾಕ್ ಹಣಾಹಣಿ!

ನಾಯಕ ರೋಹಿತ್ ಶರ್ಮಾ ನಾಯಕತ್ವಕ್ಕೂ ಟೀಂ ಇಂಡಿಯಾ ಪಾರುಪತ್ವ ಮೆರೆಯುವಲ್ಲಿ ಸೋತಿದೆ. ಟಿ20 ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋತಿದೆ.

ಐಸಿಸಿ ಟಿ20 ವಿಶ್ವಕಪ್: ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ ಟೀಂ ಇಂಡಿಯಾ, ಫೈನಲ್‌ನಲ್ಲಿ ಇಂಗ್ಲೆಂಡ್-ಪಾಕ್ ಹಣಾಹಣಿ!
ಸಂಗ್ರಹ ಚಿತ್ರ
Published On :

ಅಡಿಲೇಡ್: ನಾಯಕ ರೋಹಿತ್ ಶರ್ಮಾ ನಾಯಕತ್ವಕ್ಕೂ ಟೀಂ ಇಂಡಿಯಾ ಪಾರುಪತ್ವ ಮೆರೆಯುವಲ್ಲಿ ಸೋತಿದೆ. ಟಿ20 ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಸೋತಿದೆ. 

ಅಡಿಲೇಡ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಬಾರಿಸಿದ್ದು ಇಂಗ್ಲೆಂಡ್ ಗೆ ಗೆಲ್ಲಲು 169 ರನ್ ಗಳ ಗುರಿ ನೀಡಿತ್ತು. ಈ ರನ್ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ವಿಕೆಟ್ ನಷ್ಟವಿಲ್ಲದೆ 170 ರನ್ ಪೇರಿಸಿ ಗೆಲುವಿನ ನಗೆ ಬೀರಿದೆ.

ಇಂಗ್ಲೆಂಡ್ ಪರ ಜೋಸ್ ಬಟ್ಲರ್ ಅಜೇಯ 80 ಹಾಗೂ ಅಲೆಕ್ಸ್ ಹಾಲೆಸ್ ಅಜೇಯ 86 ರನ್ ಪೇರಿಸಿದ್ದು ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟರು.    

ಭಾರತ ಪರ ಕೆಎಲ್ ರಾಹುಲ್ 5, ರೋಹಿತ್ ಶರ್ಮಾ 27 ರನ್ ಪೇರಿಸಿದ್ದಾರೆ. ಇನ್ನು ಮಾಜಿ ನಾಯಕ ವಿರಾಟ್ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 50 ರನ್ ಬಾರಿಸಿದ್ದು ಕೊಹ್ಲಿಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಸಹ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು 63 ರನ್ ಕಲೆಹಾಕಿದ್ದಾರೆ. ಹೀಗಾಗಿ ಭಾರತ 168 ರನ್ ಪೇರಿಸಲು ಸಾಧ್ಯವಾಯಿತು. 

ಅದಾಗಲೇ ಫೈನಲ್ ಪ್ರವೇಶಿಸಿರುವ ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವೆ ನವೆಂಬರ್ 13ರಂದು ಫೈನಲ್ ಹಣಾಹಣಿ ನಡೆಯಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.