ಕ್ರಿಕೆಟ್

ಟಿ-20 ಕ್ರಿಕೆಟ್ ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ವಿರಾಟ್ ಕೊಹ್ಲಿ!

ಟೀಂ ಇಂಡಿಯಾ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ಟಿ-20 ಕ್ರಿಕೆಟ್ ನಲ್ಲಿ 4,000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ಟಿ-20 ಕ್ರಿಕೆಟ್ ನಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ವಿರಾಟ್ ಕೊಹ್ಲಿ!
ವಿರಾಟ್ ಕೊಹ್ಲಿ
Published On :

ಆಡಿಲೇಡ್: ಟೀಂ ಇಂಡಿಯಾ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ.  ಟಿ-20 ಕ್ರಿಕೆಟ್ ನಲ್ಲಿ 4,000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಸೆಮಿ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದರು.

ಟಿ-20 ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸುವವರಲ್ಲಿ 34 ವರ್ಷದ ವಿರಾಟ್ ಕೊಹ್ಲಿ ಈಗಾಗಲೇ ಅಗ್ರಸ್ಥಾನದಲ್ಲಿದ್ದಾರೆ. ಟಿ-20 ವಿಶ್ವಕಪ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಬ್ಯಾಟ್ಸ್ ಮನ್ ಗಳಲ್ಲಿಯೂ ಕೊಹ್ಲಿ ಮುಂಚೂಣಿಯಲ್ಲಿದ್ದಾರೆ. 115ನೇ ಗೇಮ್ ನಲ್ಲಿ ಕೊಹ್ಲಿ ಈ ಮೈಲುಗಲ್ಲು ಸಾಧಿಸಿದರು.

ಟಿ-20 ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಉತ್ತಮ ಫಾರ್ಮ್ ನಲ್ಲಿದ್ದಾರೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಇವರ ನೆರವಿನಿಂದಲೇ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.