2ನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ, ಪಂದ್ಯ 29 ಓವರ್ ಗೆ ಸೀಮಿತ, ಭಾರತಕ್ಕೆ ಆರಂಭಿಕ ಆಘಾತ
ಭಾರತ-ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದು, ಪಂದ್ಯವನ್ನು ತಲಾ 29 ಓವರ್ ಗಳಿಗೆ ಸೀಮಿತಗೊಳಿಸಲಾಗಿದೆ.

ಹ್ಯಾಮಿಲ್ಟನ್: ಭಾರತ-ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದು, ಪಂದ್ಯವನ್ನು ತಲಾ 29 ಓವರ್ ಗಳಿಗೆ ಸೀಮಿತಗೊಳಿಸಲಾಗಿದೆ.
ಟಾಸ್ ಸೋತರೂ ಬ್ಯಾಟಿಂಗ್ ಆರಂಭಿಸಿರುವ ಭಾರತ ತಂಡ ಆರಂಭಿಕ ಆಘಾತ ಎದುರಿಸಿದ್ದು, 3ರನ್ ಗಳಿಸಿದ್ದ ನಾಯಕ ಶಿಖರ್ ಧವನ್ ಮ್ಯಾಟ್ ಹೆನ್ರಿ ಬೌಲಿಂಗ್ ನಲ್ಲಿ ಔಟಾಗಿದ್ದಾರೆ. ಮತ್ತೊಂದು ತುದಿಯಲ್ಲಿ ಶುಭಮನ್ ಗಿಲ್ 31 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದು, ಧವನ್ ಬಳಿಕ ಕ್ರೀಸ್ ಗೆ ಆಗಮಿಸಿರುವ ಸೂರ್ಯ ಕುಮಾರ್ ಯಾದವ್ 6ರನ್ ಗಳಿಸಿ ಗಿಲ್ ಗೆ ಉತ್ತಮ ಸಾಥ್ ನೀಡಿದ್ದಾರೆ.
ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ
ನ್ಯೂಜಿಲೆಂಡ್ ವಿರುದ್ಧದ ಎರಡನೇ ಪಂದ್ಯದಲ್ಲಿ ಟಾಸ್ ಸೋತಿರುವ ಭಾರತ ತಂಡ ಬ್ಯಾಟಿಂಗ್ ಆರಂಭಿಸಿದೆ. ಈಗಾಗಲೇ ಮೊದಲ ಪಂದ್ಯವನ್ನು ಹೀನಾಯವಾಗಿ ಸೋತಿರುವ ಭಾರತಕ್ಕೆ ಟೂರ್ನಿಯಲ್ಲಿ ಕಮ್ ಬ್ಯಾಕ್ ಮಾಡಲು ಈ ಪಂದ್ಯ ಮಹತ್ವದ್ದಾಗಿದ್ದು ಶತಾಯಗತಾಯ ಗೆಲ್ಲಲೇ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಹೊರತಾಗಿಯೂ ಭಾರತ ತಂಡ ಕಳಪೆ ಬೌಲಿಂಗ್ ನಿಂದಾಗಿ ಪಂದ್ಯ ಕೈಚೆಲ್ಲಿತ್ತು. ಈ ಬಾರಿಯೂ ನ್ಯೂಜಿಲೆಂಡ್ ರನ್ ಚೇಸಿಂಗ್ ಮೊರೆ ಹೋಗಿದ್ದು, ಭಾರತೀಯ ಬೌಲರ್ ಗಳಿಗೆ ಈ ಪಂದ್ಯ ಅಗ್ನಿ ಪರೀಕ್ಷೆಯಾಗಿರಲಿದೆ.
ಇನ್ನು 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಒಂದು ಪಂದ್ಯ ಸೋತಿರುವುದರಿಂದ ಈ ಪಂದ್ಯವನ್ನು ಗೆದ್ದು ಸರಣಿ ಸಮಬಲ ಮಾಡಿಕೊಳ್ಳುವುದು ಟೀಂ ಇಂಡಿಯಾ ಗುರಿಯಾಗಿದೆ. ಅಂತೆಯೇ ಮೊದಲ ಪಂದ್ಯದಂತೆಯೇ 2ನೇ ಪಂದ್ಯವನ್ನೂ ಗೆದ್ದು ಸರಣಿ ಕೈ ವಶ ಮಾಡಿಕೊಳ್ಳಲು ಕಿವೀಸ್ ಪಡೆ ತವಕಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


