ಕೊಹ್ಲಿ, ಭುವನೇಶ್ವರ್ ಮಿಂಚಿನ ಆಟ; ಅಫ್ಘಾನ್ ವಿರುದ್ಧ ಭಾರತಕ್ಕೆ 101 ರನ್‌ಗಳ ಗೆಲುವು
ಏಷ್ಯಾಕಪ್ ಸೂಪರ್ 4 ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಅಬ್ಬರದ ಶತಕದ ನೆರವಿನಿಂದ ಭಾರತ ಅಫ್ಘಾನಿಸ್ತಾನ ವಿರುದ್ಧ 101 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ದುಬೈ: ಏಷ್ಯಾಕಪ್ ಸೂಪರ್ 4 ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರ ಅಬ್ಬರದ ಶತಕದ ನೆರವಿನಿಂದ ಭಾರತ ಅಫ್ಘಾನಿಸ್ತಾನ ವಿರುದ್ಧ 101 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ವಿರಾಟ್ ಕೊಹ್ಲಿ ಅವರು ನವೆಂಬರ್ 2019 ರ ನಂತರ ಇಂದು ಮೊದಲ ಬಾರಿಗೆ ಶತಕ ಸಿಡಿಸಿದ್ದು, ಕೇವಲ 61 ಎಸೆತಗಳಲ್ಲಿ ಅಜೇಯ 122 ರನ್ ಗಳಿಸಿದರು.
ಇಂದು ರಾತ್ರಿ ದುಬೈನ ಇಂಟರ್‌ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ವಿರಾಟ್ ಕೊಹ್ಲಿ ಅವರ ಶತಕ(122) ಹಾಗೂ ಕೆಎಲ್ ರಾಹುಲ್ ಅವರ ಭರ್ಜರಿ ಅರ್ಧ ಶತಕ(62)ದ ನೆರವಿನಿಂದ ಎರಡು ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತು.
ಬೃಹತ್ ಟಾರ್ಗೆಟ್ ಬೆನ್ನತ್ತಿದ ಅಫ್ಘಾನಿಸ್ತಾನವನ್ನು ಎಂಟು ವಿಕೆಟ್‌ಗೆ 111 ರನ್‌ಗಳಿಗೆ ನಿರ್ಬಂಧಿಸುವ ಮೂಲಕ ಭಾರತ ಸುಲಭವಾಗಿ ಗೆಲುವಿನ ಗುರಿ ತಲುಪಿತು.
ಇದನ್ನು ಓದಿ: ಟಿ20 ವಿಶ್ವಕಪ್: ಅಭ್ಯಾಸ ಪಂದ್ಯಗಳಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ!
ಅಫ್ಘಾನ್ ಪರ ಇಬ್ರಾಹಿಂ ಝದ್ರಾನ್ 64 ರನ್ ಗಳಿಸಿ ಅಜೇಯರಾಗಿ ಉಳಿದರು. ಭಾರತದ ಪರ ಭುವನೇಶ್ವರ್ ಕುಮಾರ್ ನಾಲ್ಕು ವಿಕೆಟ್ ಪಡೆದು ಮಿಂಚಿದರು.
ಸಂಕ್ಷಿಪ್ತ ಸ್ಕೋರ್‌ಗಳು:
ಭಾರತ: 20 ಓವರ್‌ಗಳಲ್ಲಿ 2 ವಿಕೆಟ್‌ಗೆ 212 (ವಿರಾಟ್ ಕೊಹ್ಲಿ ಔಟಾಗದೆ 122, ಕೆಎಲ್ ರಾಹುಲ್ 62; ಫರೀದ್ ಅಹ್ಮದ್ 2/57).
ಅಫ್ಘಾನಿಸ್ತಾನ: 20 ಓವರ್‌ಗಳಲ್ಲಿ 8 ವಿಕೆಟ್‌ಗೆ 111 (ಇಬ್ರಾಹಿಂ ಜದ್ರಾನ್ ಔಟಾಗದೆ 64; ಭುವನೇಶ್ವರ್ ಕುಮಾರ್ 5/4).
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


