ಕ್ರಿಕೆಟ್

ಐಪಿಎಲ್ 2023: ಗುಜರಾತ್ ಟೈಟನ್ಸ್ ಗೆ ಭಾರಿ ಆಘಾತ: ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯ, ಟೂರ್ನಿಯಿಂದಲೇ ಔಟ್!

ಐಪಿಎಲ್ 2023 ಟೂರ್ನಿಯ ಆರಂಭದಲ್ಲೇ ಗಾಯದ ಸಮಸ್ಯೆ ಎದುರಾಗಿದ್ದು, ಗುಜರಾತ್ ಟೈಟನ್ಸ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಐಪಿಎಲ್ 2023: ಗುಜರಾತ್ ಟೈಟನ್ಸ್ ಗೆ ಭಾರಿ ಆಘಾತ: ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯ, ಟೂರ್ನಿಯಿಂದಲೇ ಔಟ್!
ಗಾಯದ ಸಮಸ್ಯೆಯಿಂದ ಕೇನ್ ವಿಲಿಯಮ್ಸನ್ ಟೂರ್ನಿಯಿಂದ ಔಟ್
Published On :

ಮುಂಬೈ: ಐಪಿಎಲ್ 2023 ಟೂರ್ನಿಯ ಆರಂಭದಲ್ಲೇ ಗಾಯದ ಸಮಸ್ಯೆ ಎದುರಾಗಿದ್ದು, ಗುಜರಾತ್ ಟೈಟನ್ಸ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಹೌದು.. ಗುಜರಾತ್ ಟೈಟನ್ಸ್ (ಜಿಟಿ) ಬ್ಯಾಟರ್ ಕೇನ್ ವಿಲಿಯಮ್ಸನ್ 2023ರ ಐಪಿಎಲ್ ಆವೃತ್ತಿಯಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಗುಜರಾತ್‌ ತಂಡ, ‘ನಾವು ಈ ವಿಷಯ ತಿಳಸಲು ವಿಷಾದಿಸುತ್ತೇವೆ. ಕೇನ್ ವಿಲಿಯಮ್ಸನ್ ಅವರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಗಾಯಗೊಂಡಿದ್ದರು. ಹೀಗಾಗಿ ಈ ಟೂರ್ನಿಯಲ್ಲಿ ಅವರು ಆಡುತ್ತಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ, ಮತ್ತೆ ತಂಡಕ್ಕೆ ಮರಳಲಿ ಎಂದು ಆಶಿಸುತ್ತೇವೆ’ ಎಂದು ಹೇಳಿದೆ.

32 ವರ್ಷದ ವಿಲಿಯಮ್ಸನ್‌ ಅವರು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧದ ಪಂದ್ಯದ ವೇಳೆ, ಬೌಂಡರಿ ಲೈನ್‌ ಬಳಿ ಕ್ಯಾಚ್ ಹಿಡಿಯುವಾಗ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಈ ಪಂದ್ಯದಲ್ಲಿ ವಿಲಿಯಮ್ಸನ್ ಬದಲಿಗೆ ಸಾಯಿ ಸುದರ್ಶನ್ ಅವರು ‘ಇಂಪ್ಯಾಕ್ಟ್ ಪ್ಲೇಯರ್’ ಆಗಿ ಆಡಿದ್ದರು. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.