ಕ್ರಿಕೆಟ್

ಐಪಿಎಲ್ 2023: ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಟೂರ್ನಿಯಿಂದ ಹೊರಕ್ಕೆ! 

ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರು ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಹೊರಬಿದಿದ್ದಾರೆ. ಇಡೀ ಟೂರ್ನಿಗೆ ಅಲಭ್ಯರಾಗುವ ವಿಷಯವನ್ನು ಅವರು ತಮ್ಮ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ ಗೆ ತಿಳಿಸಿದ್ದಾರೆ ಎಂದು ಇಎಸ್ ಪಿಎನ್ ಕ್ರಿಕ್ ಇನ್ಫೋ ವರದಿ ಹೇಳಿದೆ.

ಐಪಿಎಲ್ 2023: ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಟೂರ್ನಿಯಿಂದ ಹೊರಕ್ಕೆ! 
ಶಕೀಬ್ ಅಲ್ ಹಸನ್
Published On :

ಮುಂಬೈ: ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರು ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಹೊರಬಿದಿದ್ದಾರೆ. ಇಡೀ ಟೂರ್ನಿಗೆ ಅಲಭ್ಯರಾಗುವ ವಿಷಯವನ್ನು ಅವರು ತಮ್ಮ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ ಗೆ ತಿಳಿಸಿದ್ದಾರೆ ಎಂದು ಇಎಸ್ ಪಿಎನ್ ಕ್ರಿಕ್ ಇನ್ಫೋ ವರದಿ ಹೇಳಿದೆ.

ಅಂತಾರಾಷ್ಟ್ರೀಯ ಪಂದ್ಯಗಳು ಇರುವುದರಿಂದ ಮತ್ತು ವೈಯಕ್ತಿಕ ಕಾರಣಗಳಿಂದಾಗಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಡಿಸೆಂಬರ್ ನಲ್ಲಿ ನಡೆದ ಐಪಿಎಲ್ ಹರಾಜು ವೇಳೆಯಲ್ಲಿ ರೂ. 1.5 ಕೋಟಿಗೆ ಕೆಕೆಆರ್ ಶಕೀಬ್ ಅವರನ್ನು ಖರೀದಿಸಿತ್ತು.

ಮುಂದಿನ ಕೆಲವು ವಾರ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಲ್ ರೌಂಡರ್ ಶಕೀಬ್ ಬ್ಯುಸಿ ಇರುವುದರಿಂದ ಐಪಿಎಲ್ ನಲ್ಲಿ ಆಡುತ್ತಿಲ್ಲ. ಇವರೊಂದಿಗೆ ಲಿಟ್ಟನ್ದಾಸ್ ಕೂಡಾ ಇಂದು ನಡೆಯುತ್ತಿರುವ ಕೆಕೆಆರ್ ಆರಂಭಿಕ ಪಂದ್ಯದಿಂದ ಹೊರಗುಳಿದಿದ್ದಾರೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅವರು ಕೂಡಾ ಬ್ಯುಸಿಯಾಗಿದ್ದು, ಮತ್ತೆ ಕೆಕೆಆರ್ ತಂಡ ಸೇರಿಕೊಳ್ಳಲಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.