IPL 2023: ಕೋಲ್ಕತ್ತಾ ವಿರುದ್ಧ ಆರ್ ಸಿಬಿ ಗೆ 81 ರನ್ ಸೋಲು!
ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 81 ರನ್ಗಳಿಂದ ಸೋಲಿಸಿದೆ.

ಕೋಲ್ಕತ್ತಾ: ಐಪಿಎಲ್ 2023 ರ ಒಂಬತ್ತನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 81 ರನ್ಗಳಿಂದ ಸೋಲಿಸಿದೆ.
ಟಾಸ್ ಗೆದ್ದ RCB ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ 204 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆರ್ ಸಿಬಿ 123 ರನ್ಗಳಿಗೆ ಸೋಲು ಕಂಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ 81 ರನ್ಗಳಿಂದ ಜಯ ಸಾಧಿಸಿದೆ. ಇದರೊಂದಿಗೆ ಕೋಲ್ಕತ್ತಾ ತಂಡ ಟೂರ್ನಿಯಲ್ಲಿ ಚೊಚ್ಚಲ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೋಲ್ಕತ್ತಾ ಶಾರ್ದೂಲ್ ಠಾಕೂರ್ ಅವರ 68, ರಹಮಾನುಲ್ಲಾ ಗುರ್ಬಾಜ್ ಅವರ 57 ಮತ್ತು ರಿಂಕು ಸಿಂಗ್ ಅವರ 46 ರನ್ಗಳಿಂದ ಏಳು ವಿಕೆಟ್ಗೆ 204 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬೆಂಗಳೂರು ತಂಡ 17.4 ಓವರ್ಗಳಲ್ಲಿ 123 ರನ್ಗಳಿಗೆ ಆಲೌಟಾಯಿತು. ಬೆಂಗಳೂರು ಪರ ನಾಯಕ ಫಾಫ್ ಡುಪ್ಲೆಸಿಸ್ ಗರಿಷ್ಠ 23 ರನ್ ಗಳಿಸಿದರು.
ಕೋಲ್ಕತ್ತಾ ಪರ ವರುಣ್ ಚಕ್ರವರ್ತಿ 4, ಸುಯಶ್ ಶರ್ಮಾ 3 ಹಾಗೂ ಸುನಿಲ್ ನರೈನ್ 2 ವಿಕೆಟ್ ಪಡೆದರು. ಶಾರ್ದೂಲ್ ಠಾಕೂರ್ ಒಂದು ವಿಕೆಟ್ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


